ರಾಯಚೂರು, ಸೆ.17: ಲಿಂಗಸುಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹1.05 ಲಕ್ಷ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
2024ರಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ರಾಯಚೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಲಿಂಗಸುಗೂರು ಪೀಠವು ಆ.3ರಂದು ಆರೋಪಿಯನ್ನು ತಪ್ಪಿತಸ್ಥನೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಧಿಸಲಾದ ದಂಡದ ಮೊತ್ತದಲ್ಲಿ ₹1 ಲಕ್ಷವನ್ನು ಸಂತ್ರಸ್ತೆಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.



