ಮಾನ್ವಿ: ಪಟ್ಟಣದ ಒಳಬಳ್ಳಾರಿ ಶ್ರೀ ಸುವರ್ಣಗಿರಿ ವಿರಕ್ತಮಠದ ಶ್ರೀ ಚನ್ನಬಸವ ಶಿವಯೋಗಿಗಳ ಪ್ರಸಾದ ನಿಲಯದ ಆವರಣದಲ್ಲಿ ನೂತನ ಶ್ರೀ ವೀರಶೈವ ಲಿಂಗಾಯತ ಸಮುದಾಯ ಭವನ ಹಾಗೂ ಶ್ರೀ ಚನ್ನಬಸವೇಶ್ವರ ಕಲ್ಯಾಣ ಮಂಟಪ ನಿರ್ಮಾಣ ಕಾಮಗಾರಿಗೆ ಒಳಬಳ್ಳಾರಿ ಶ್ರೀ ಸುವರ್ಣಗಿರಿ ವಿರಕ್ತಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಲಿಂ. ಶ್ರೀ ಚನ್ನಬಸವ ಶಿವಯೋಗಿಗಳು ಮಾನ್ವಿಯಲ್ಲಿ ಸಮಾಜದ ಅಭಿವೃದ್ಧಿ ಹಾಗೂ ಭಕ್ತರ ಅನುಕೂಲಕ್ಕಾಗಿ ನಾಲ್ಕು ಎಕರೆ ಜಾಗದಲ್ಲಿ ಪ್ರಸಾದ ನಿಲಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿದ್ದರು. ಇದೀಗ ಅದೇ ಆವರಣದಲ್ಲಿ ಮಾನ್ವಿ ತಾಲೂಕಿನ ಭಕ್ತರು ಹಾಗೂ ಸಮಾಜದ ಜನರ ಅನುಕೂಲಕ್ಕಾಗಿ ಸುಮಾರು ₹1.50 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಲ್ಯಾಣ ಮಂಟಪ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ನೂತನ ಕಲ್ಯಾಣ ಮಂಟಪವು ಸಮಾಜದ ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ. ತಾಲೂಕಿನ ಭಕ್ತರು ಹಾಗೂ ಸಾರ್ವಜನಿಕರು ಈ ಭವನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಸುವರ್ಣಗಿರಿ ವಿರಕ್ತಮಠದ ಕಿರಿಯ ಶ್ರೀ ಬಸವಲಿಂಗ ಮಹಾಸ್ವಾಮಿಗಳು, ಯದ್ದಲದೊಡ್ಡಿಮಠದ ಶ್ರೀ ಮಹಾಲಿಂಗ ಮಹಾಸ್ವಾಮಿಗಳು, ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಕರೆಗುಡ್ಡ ಶ್ರೀ ಮಹಾಂತೇಶ್ವರ ಮಠದ ಶ್ರೀ ಮಹಾಂತಲಿಂಗ ಮಹಾಸ್ವಾಮಿಗಳು, ಚೀಕಲಪರ್ವಿಯ ಶ್ರೀ ರುದ್ರಮುನೀಶ್ವರ ಮಠದ ಶ್ರೀ ಸದಾಶಿವ ಮಹಾಸ್ವಾಮಿಗಳು, ಅಡವಿ ಅಮರೇಶ್ವರ ಮಠದ ಶ್ರೀ ತೋಟಾಂದಾರ್ಯ ಮಹಾಸ್ವಾಮಿಗಳು, ಅಕ್ಕಿಆಲೂರಿನ ಶ್ರೀ ಶಿವಬಸವ ಸ್ವಾಮಿಗಳು, ಕಲ್ಲೂರಿನ ಶ್ರೀ ಶಂಭುಲಿಂಗ ಮಹಾಸ್ವಾಮಿಗಳು, ನರಡಗುಂಬದ ಶ್ರೀ ಪಂಚಮಸಿದ್ದಲಿಂಗ ಮಹಾಸ್ವಾಮಿಗಳು, ಸಿರುಗುಪ್ಪ ಗುರುಬಸವ ಮಹಾಮಠದ ಶ್ರೀ ಬಸವ ಭೂಷಣ ಮಹಾಸ್ವಾಮಿಗಳು ಹಾಗೂ ತೆಲಂಗಾಣದ ಶ್ರೀ ವಿರೂಪಾಕ್ಷ ಸ್ವಾಮಿಗಳು ಸೇರಿದಂತೆ ವಿವಿಧ ಮಠಾಧೀಶರು ಸಾನ್ನಿಧ್ಯ ವಹಿಸಿದ್ದರು.

ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು, ಶಾಸಕ ಹಂಪಯ್ಯ ನಾಯಕ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ರಾಯಚೂರು ಶಾಸಕ ಡಾ. ಎಸ್. ಶಿವರಾಜ ಪಾಟೀಲ್, ಮಾಜಿ ಶಾಸಕರಾದ ಬಸವನಗೌಡ ಬ್ಯಾಗವಾಟ, ರಾಜಾ ವೆಂಕಟಪ್ಪ ನಾಯಕ, ಮುಖಂಡ ದೊಡ್ಡಬಸಪ್ಪಗೌಡ, ತಾಲೂಕು ವೀರಶೈವ ಲಿಂಗಾಯತ ಸಮಾಜದ ಗೌರವಾಧ್ಯಕ್ಷ ಶ್ರೀಧರಸ್ವಾಮಿ, ತಾಲೂಕು ಅಧ್ಯಕ್ಷ ಹರಿಹರ ಪಾಟೀಲ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಅರುಣಚಂದಾ, ತಿಮ್ಮರೆಡ್ಡಿ ಭೋಗವತಿ, ಸಿದ್ದಲಿಂಗಪ್ಪ ವಕೀಲರು, ಶಿವಶಂಕರಯ್ಯ ಸ್ವಾಮಿ, ಗುರುಸಿದ್ದಪ್ಪ ಕಣ್ಣೂರು, ವೀರನಗೌಡ, ವಿಜಯಕುಮಾರ, ವೆಂಕನಗೌಡ, ವಿಶ್ವನಾಥ ಪಾಟೀಲ್, ಜಗದೀಶ್ ಒತ್ತೂರು, ಬಸವರಾಜಪ್ಪ ಚಿಮ್ಮಲಾಪುರ, ಮಲ್ಲನಗೌಡ ನಕ್ಕುಂದಿ, ಬಸವರಾಜ ಚೀಕಲಪರ್ವಿ, ಸುರೇಶ ನಾಡಗೌಡ, ಹನುಮಂತರೆಡ್ಡಿ, ಶರಣಪ್ಪಗೌಡ ನಕ್ಕುಂದಿ, ಶಿವಲಿಂಗಯ್ಯ ಸ್ವಾಮಿ ಸೇರಿದಂತೆ ಸಮಾಜದ ಮುಖಂಡರು ಹಾಗೂ ಭಕ್ತರು ಭಾಗವಹಿಸಿದ್ದರು.