ಮಾನ್ವಿ, ಅ.9: ತಾಲೂಕಿನ ಚಿಕಲಪರ್ವಿ ಶ್ರೀ ರುದ್ರಮುನೀಶ್ವರ ಮಠದ ಶ್ರೀ ಸದಾಶಿವ ಮಹಾಸ್ವಾಮಿಗಳ ನೇತೃತ್ವದಲ್ಲಿ ತಮಗೆಲ್ಲಿರೂ ಶ್ರೀಮಠದ ನೂತನ ದಾಸೋಹ ಭವನ ನಿರ್ಮಾಣಕ್ಕೆ ನವೆಂಬರ್ 10ರಂದು ಭೂಮಿಪೂಜೆ ನೆರವೇರಿಸಲು ನಿರ್ಧರಿಸಲಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ಶ್ರೀಮಠಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ನೂತನ ದಾಸೋಹ ಭವನ ನಿರ್ಮಾಣಕ್ಕೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಭವನ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲು ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
ದಾಸೋಹ ಭವನ ನಿರ್ಮಾಣ ಕಾರ್ಯಕ್ಕೆ ಅಗತ್ಯವಾದ ಸ್ಥಳವನ್ನು ಗುರುತಿಸಲಾಗಿದ್ದು, ನವೆಂಬರ್ 10ರಂದು ಭೂಮಿಪೂಜೆ ನೆರವೇರಿಸುವ ಮೂಲಕ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಲಾಗುವುದು.
ಇದೇ ಸಂದರ್ಭದಲ್ಲಿ ಅಕ್ಟೋಬರ್ 31ರ ಶನಿವಾರ ಹಾಗೂ ನವೆಂಬರ್ 1ರ ಭಾನುವಾರ ಎರಡು ದಿನಗಳ ಕಾಲ ಶ್ರೀಮಠದಲ್ಲಿ ಸಂಪೂರ್ಣ ಹಳೆ ಕಟ್ಟಡವನ್ನು ತೆರವುಗೊಳಿಸುವ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಪಾಲ್ಗೊಂಡು ಸಹಕರಿಸುವಂತೆ ಶ್ರೀಮಠದ ವತಿಯಿಂದ ಮನವಿ ಮಾಡಲಾಗಿದೆ.
ಹಳೆಯ ಕಟ್ಟಡವನ್ನು ತೆರವುಗೊಳಿಸುವ ಸಂದರ್ಭದಲ್ಲಿ ಅಗತ್ಯವಾದ ವಾಹನಗಳು ಹಾಗೂ ಇತರ ಸೌಲಭ್ಯಗಳೊಂದಿಗೆ ಆಗಮಿಸಿ ಸೇವಾ ಕಾರ್ಯದಲ್ಲಿ ಭಾಗವಹಿಸುವಂತೆ ಭಕ್ತರಿಗೆ ಕರೆ ನೀಡಲಾಗಿದೆ.
ಶ್ರೀಮಠದ ಅಭಿವೃದ್ಧಿ ಹಾಗೂ ಭಕ್ತರ ಅನುಕೂಲಕ್ಕಾಗಿ ಕೈಗೊಂಡಿರುವ ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು. ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ನಡೆಯುವ ಸೇವಾ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನೂತನ ದಾಸೋಹ ಭವನ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ಶ್ರೀ ಸದಾಶಿವ ಮಹಾಸ್ವಾಮಿಗಳು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.



