ಲಿಂಗಸುಗೂರು: ಪಟ್ಟಣದ 17ನೇ ವಾರ್ಡ್ನಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನವರಾತ್ರೋತ್ಸವ ಹಾಗೂ ವಿಜಯದಶಮಿ ಹಬ್ಬದ ಅಂಗವಾಗಿ ಅ.11ರಿಂದ 19ರವರೆಗೆ ಭಗವತಿ ಭದ್ರಕಾಳಿಗೆ ಒಂಬತ್ತು ದಿನಗಳ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ನವರಾತ್ರಿಯ ಪ್ರತಿದಿನ ದೇವಿಗೆ ವಿಶೇಷ ವಸ್ತ್ರಾಲಂಕಾರ, ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು, ಭಕ್ತರಿಂದ ಉಡಿ ತುಂಬುವ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.
ಭದ್ರಕಾಳಿಗೆ ಉಡಿ ತುಂಬಿಸಲು ಇಚ್ಛಿಸುವ ಭಕ್ತರು ಹಾಗೂ ಸಾರ್ವಜನಿಕರು ದೇವಸ್ಥಾನದ ಕಚೇರಿಯಲ್ಲಿ ತಮ್ಮ ಹೆಸರು ನೋಂದಾಯಿಸಿ ರಸೀದಿ ಪಡೆದುಕೊಳ್ಳಬಹುದು ಎಂದು ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ ಸಮಿತಿ ಟ್ರಸ್ಟ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವರಾತ್ರೋತ್ಸವದ ಒಂಬತ್ತು ದಿನಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನ ಸಮಿತಿ ಮನವಿ ಮಾಡಿದೆ.



