ಲಿಂಗಸುಗೂರು: ಪಟ್ಟಣದ 17ನೇ ವಾರ್ಡ್ನ ಲಕ್ಷ್ಮೀನಗರದಲ್ಲಿರುವ ಬನ್ನಿ ಮಹಾಂಕಾಳಿ ಹಾಗೂ ಗಣೇಶ ದೇವಸ್ಥಾನದಲ್ಲಿ ನವರಾತ್ರೋತ್ಸವ ಮತ್ತು ವಿಜಯದಶಮಿ ಹಬ್ಬದ ಅಂಗವಾಗಿ ಅ.11ರಿಂದ 19ರವರೆಗೆ ಒಂಬತ್ತು ದಿನಗಳ ಕಾಲ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದ್ದು, ಒಂಬತ್ತು ದಿನಗಳ ಕಾಲ ಮಹಿಳೆಯರು ಪ್ರತಿದಿನ ಬೆಳಗಿನ ಜಾವ ದೇವಸ್ಥಾನಕ್ಕೆ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ನವರಾತ್ರಿಯ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ವಿಧಿವಿಧಾನಗಳು ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಆಶೀರ್ವಾದ ಪಡೆಯುವಂತೆ ಬನ್ನಿ ಮಹಾಂಕಾಳಿ ಹಾಗೂ ಗಣೇಶ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಾ. ಚಂದ್ರಶೇಖರ ಪಾಟೀಲ್ (ಚಂಪಾ) ತಿಳಿಸಿದ್ದಾರೆ.



