ರಾಯಚೂರು ಅ. 09 (ಕರ್ನಾಟಕ ವಾರ್ತೆ): 2023ನೇ ವರ್ಷದಲ್ಲಿ ಪ್ರಕಟಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಡಾ.ವಿಷ್ಣುವರ್ಧನ ಸ್ಮಾರಕ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ, ಎಂ.ಸಿ ಬಡಾವಣೆ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹತ್ತಿರ ವಿಜಯನಗರ ಬೆಂಗಳೂರು-560040 ಇಲ್ಲಿನ ಗ್ರಂಥಾಲಯದ ಸಭಾಂಗಣದಲ್ಲಿ (ನೆಲಮಹಡಿ) ದಿನಾಂಕ:12.10.2026 ರಿಂದ 14.10.2026ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಏರ್ಪಡಿಸಲಾಗುವುದು. ಹಾಗೂ ಆಯ್ಕೆಯಾದ ತಾತ್ಕಾಲಿಕ ಪಟ್ಟಿಯನ್ನು ಇಲಾಖೆ ಅಧಿಕೃತ ವೆಬ್ಸೈಟ್ dpl.karnataka.gov.in ನಲ್ಲಿ ಪ್ರಕಟಿಸಲಾಗುವುದು.
ರಾಜ್ಯ ಮಟ್ಟದ ಪುಸ್ತಕ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ತಮ್ಮ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:12.10.2026 ರಿಂದ 22.10.2026ರ ಸಂಜೆ 5:30ರ ಒಳಗಾಗಿ ಆಯುಕ್ತರು ಸಾರ್ವಜನಿಕ ಗ್ರಂಥಾಲಯ ಇಲಾಖೆ ವಿಶ್ವೇಶ್ವರಯ್ಯ ಮುಖ್ಯಗೋಪುರ, 4ನೇ ಮಹಡಿ ಡಾ.ಅಂಬೇಡ್ಕರ್ ವೀದಿ, ಬೆಂಗಳೂರು 560001 ಇಲ್ಲಿಗೆ ಲಿಖಿತವಾಗಿ ಮನವಿ ಸಲ್ಲಿಸಬಹುದಾಗಿದೆ. ನಂತರ ಬಂದ ಮನವಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಸಿದ್ಧಾರ್ಥ ಎ.ಭಾವಿಕಟ್ಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



