ರಾಯಚೂರು, ಅ. 29: ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನವೆಂಬರ್ 14 ಮತ್ತು 15ರಂದು ನಡೆಯಲಿರುವ ರಾಯಚೂರು ಜಿಲ್ಲಾ 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪುಸ್ತಕ ಮಾರಾಟ ಹಾಗೂ ವಾಣಿಜ್ಯ ಮಳಿಗೆಗಳನ್ನು ತೆರೆಯಲು ಆಸಕ್ತರಿಂದ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎರಡು ದಿನಗಳ ಕಾಲ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಪ್ರಕಾಶಕರು, ಮಾರಾಟಗಾರರು ಹಾಗೂ ವಿವಿಧ ವಾಣಿಜ್ಯ ವ್ಯಾಪಾರಸ್ಥರಿಗೆ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಮಳಿಗೆಗಳನ್ನು ಪಡೆಯಲು ಇಚ್ಛಿಸುವವರು ನವೆಂಬರ್ 7ರೊಳಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಕನ್ನಡ ಸಾಹಿತ್ಯ ಪರಿಷತ್ತು ತಿಳಿಸಿದೆ.

ಸಮ್ಮೇಳನದ ಎರಡು ದಿನಗಳ ಅವಧಿಗೆ ಪುಸ್ತಕ ಮಳಿಗೆಗಳಿಗೆ ₹1,000 ಹಾಗೂ ವಾಣಿಜ್ಯ ಮಳಿಗೆಗಳಿಗೆ ₹2,000 ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ. ಮಳಿಗೆಗಳ ಹಂಚಿಕೆಯಲ್ಲಿ ಮೊದಲು ನೋಂದಾಯಿಸಿಕೊಳ್ಳುವವರಿಗೆ ಆದ್ಯತೆ ನೀಡಲಾಗುವುದು.

ಆಸಕ್ತರು ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ತಾಯಪ್ಪ ಬಿ. ಹೊಸೂರು (ಮೊ. 9845562576) ಅಥವಾ ಮಳಿಗೆ ಸಮಿತಿ ಅಧ್ಯಕ್ಷ ಎಚ್.ಎಚ್. ಮ್ಯಾದಾರ್ (ಮೊ. 9916938843) ಅವರನ್ನು ಸಂಪರ್ಕಿಸಬಹುದು ಎಂದು ಪರಿಷತ್ತಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.