ರಾಯಚೂರು ಅ. 09 (ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಅಕ್ಟೋಬರ್ 12ರ ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 1 ಗಂಟೆವರಗ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕೋರಲಾಗಿದೆ.
ನೇರ ಸಂದರ್ಶನದಲ್ಲಿ ಎರಡು ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರ. ಅರ್ಹತೆಗಳು: ಎಲ್ಲಾ ಪದವೀಧರರು ಆಸಕ್ತ 18 ರಿಂದ 28 ವರ್ಷಗಳ ವರಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ. ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾರ್ಕ್ಸ ಪ್ರತಿಗಳು ಮತ್ತು ತಮ್ಮ ಬಯೋಡೆಟಾ, ಆಧಾರ್ ಕಾರ್ಡ್ ಪ್ರತಿ, ಭಾವಚಿತ್ರಗನ್ನು ಸಲ್ಲಿಸಬೇಕು. ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ, ಬದಲಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಬಾಲಾಜಿ ಕಾಂಪ್ಲೆರ್ಕ್ಸ, ನೆಲ ಮಹಡಿ, ಗೂಡ್ ಶಡ್ ರಸ್ಥೆ, ಸ್ಟೇಷನ್ ಏರಿಯಾ, ರಾಯಚೂರು ಹಾಗೂ ದೂರವಾಣಿ ಸಂಖ್ಯೆ 08532-231684, 9008211750, 8197930236, 9916931616 ಗ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ನವೀನ್ಕುಮಾರ್ ಸಂಗೇಪಾಗ್ ಅವರು ಪ್ರಕಟಣಯಲ್ಲಿ ತಿಳಿಸಿದ್ದಾರ.



