ರಾಯಚೂರು: ನಗರದ ವಾರ್ಡ್ ನಂ.18ರಲ್ಲಿ ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಠಾಕೂರ್ ವಿನಯ್ ಸಿಂಗ್ ನಿರಂತರವಾಗಿ ಶ್ರಮಿಸುತ್ತಿದ್ದು, ಅವರ ಜನಪರ ಕಾರ್ಯಗಳಿಗೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ವಾರ್ಡ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಮೂಲಸೌಕರ್ಯ ಸಮಸ್ಯೆಗಳಿಗೆ ಸ್ಪಂದಿಸಿ, ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು ಪರಿಹಾರ ದೊರಕಿಸಲು ಅವರು ಪ್ರಯತ್ನಿಸುತ್ತಿದ್ದಾರೆ. ಕುಡಿಯುವ ನೀರಿನ ಪೂರೈಕೆ, ವಿದ್ಯುತ್ ಸಮಸ್ಯೆ, ಸ್ವಚ್ಛತೆ, ರಸ್ತೆ ಬದಿಯ ಗಿಡಗಂಟಿಗಳ ತೆರವು ಸೇರಿದಂತೆ ವಿವಿಧ ಕೆಲಸಗಳು ಸುಗಮವಾಗಿ ನಡೆಯುವಂತೆ ಸಂಬಂಧಪಟ್ಟವರೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಯಾವುದೇ ಸಮಸ್ಯೆ ಎದುರಾದಾಗ ಸಾರ್ವಜನಿಕರು ತಮ್ಮನ್ನು ಸಂಪರ್ಕಿಸಿದರೆ, ಅದು ಯಾವ ಕ್ಷೇತ್ರಕ್ಕೆ ಸಂಬಂಧಿಸಿದ್ದರೂ ಸಾಧ್ಯವಾದ ಮಟ್ಟಿಗೆ ಪರಿಹಾರ ದೊರಕಿಸುವವರೆಗೆ ಪ್ರಯತ್ನಿಸುತ್ತಾರೆ ಎಂಬ ಅಭಿಪ್ರಾಯವೂ ವಾರ್ಡ್ ನಿವಾಸಿಗಳಿಂದ ವ್ಯಕ್ತವಾಗಿದೆ.
ವಿಶೇಷವಾಗಿ ಗೋಮಾತೆಯ ಸಂರಕ್ಷಣೆ ಮತ್ತು ಸೇವಾ ಕಾರ್ಯಗಳಿಗೆ ಆದ್ಯತೆ ನೀಡುವುದರ ಜೊತೆಗೆ, ಬಡ ಹಾಗೂ ಅಗತ್ಯವಿರುವ ಕುಟುಂಬಗಳಿಗೆ ನೆರವಾಗುವ ಕಾರ್ಯಗಳಲ್ಲಿಯೂ ಠಾಕೂರ್ ವಿನಯ್ ಸಿಂಗ್ ತೊಡಗಿಸಿಕೊಂಡಿದ್ದಾರೆ ಎಂದು ಬೆಂಬಲಿಗರು ತಿಳಿಸಿದ್ದಾರೆ.
ಸಮಾಜದ ಅಭಿವೃದ್ಧಿಗೆ ಮೂಲಸೌಕರ್ಯಗಳ ಸುಧಾರಣೆಯಷ್ಟೇ ಅಲ್ಲದೆ, ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವ ಮನೋಭಾವವೂ ಅಗತ್ಯವಾಗಿದ್ದು, ವಾರ್ಡ್ ನಂ.18ರಲ್ಲಿ ಜನಸೇವೆಯನ್ನು ಕೇಂದ್ರವಾಗಿಟ್ಟುಕೊಂಡು ನಡೆಯುತ್ತಿರುವ ಇಂತಹ ಕಾರ್ಯಗಳು ಮುಂದುವರಿಯಬೇಕು ಎಂಬ ಆಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.



