ಮಾನ್ವಿ: ಲಿಂ. ಶ್ರೀ ಹಾನಗಲ್ ಕುಮಾರ ಶಿವಯೋಗಿಗಳ 159ನೇ ಜಯಂತಿ ಅಂಗವಾಗಿ ಸೆ.27ರಂದು ಪಟ್ಟಣದಲ್ಲಿ ರಥಯಾತ್ರೆ, ಭವ್ಯ ಮೆರವಣಿಗೆ ಹಾಗೂ ನೂತನ ಕಲ್ಯಾಣ ಮಂಟಪದ ಶಂಕುಸ್ಥಾಪನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಹರಿಹರ ಪಾಟೀಲ್ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಅರುಣಚಂದಾ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 7 ಗಂಟೆಗೆ ಪಟ್ಟಣದ ಬಸವ ಕಾಂಪ್ಲೆಕ್ಸ್ನಿಂದ ರಥಯಾತ್ರೆಗೆ ಚಾಲನೆ ದೊರೆಯಲಿದೆ. ಒಳಬಳ್ಳಾರಿಯ ಶ್ರೀ ಡಾ. ಸಿದ್ದಲಿಂಗ ಮಹಾಸ್ವಾಮಿಗಳ ನೇತೃತ್ವದಲ್ಲಿ ವಿವಿಧ ಮಠಗಳ 30ಕ್ಕೂ ಹೆಚ್ಚು ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ರಥಯಾತ್ರೆ ಹಾಗೂ ಮೆರವಣಿಗೆ ಸಂಚರಿಸಲಿದೆ.
ನಂತರ ಬೆಳಿಗ್ಗೆ 11.30ಕ್ಕೆ ಒಳಬಳ್ಳಾರಿಯ ಚನ್ನಬಸವ ಶಿವಯೋಗಿಗಳ ಉಚಿತ ಪ್ರಸಾದ ನಿಲಯದ ಆವರಣದಲ್ಲಿ ಮಹಾತಪಸ್ವಿ ಲಿಂ. ಶ್ರೀ ಚನ್ನಬಸವ ಶಿವಯೋಗಿಗಳ ಹೆಸರಿನಲ್ಲಿ ನಿರ್ಮಿಸಲಾಗುತ್ತಿರುವ ನೂತನ ಕಲ್ಯಾಣ ಮಂಟಪದ ಶಂಕುಸ್ಥಾಪನಾ ಕಾರ್ಯಕ್ರಮ ನೆರವೇರಲಿದೆ.
ಹಾನಗಲ್ ಕುಮಾರ ಶಿವಯೋಗಿಗಳ ಜಯಂತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತಾಲ್ಲೂಕಿನ ವೀರಶೈವ ಲಿಂಗಾಯತ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅರುಣಚಂದಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.



