ರಾಯಚೂರು ಸೆಪ್ಟಂಬರ್ 28 (ಕರ್ನಾಟಕ ವಾರ್ತೆ): ಅಕ್ಟೋಬರ್ ಮೊದಲ ವಾರದಲ್ಲಿ ಬರ ಅಧ್ಯಯನಕ್ಕಾಗಿ ಕೇಂದ್ರ ತಂಡ ರಾಜ್ಯಕ್ಕೆ ಆಗಮಿಸಲಿದ್ದು, ಮೊದಲನೇಯ ಹಂತದಲ್ಲಿ ಬರ ಪೀಡಿತ ಎಂದು ಘೋಷಣೆಯಾದ ರಾಯಚೂರು ಜಿಲ್ಲೆಯ ತಾಲೂಕುಗಳಿಗೆ ಅಕ್ಟೋಬರ್ 4ರಂದು ಭೇಟಿ ನೀಡುವ ಸಾಧ್ಯತೆ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೆಪ್ಟಂಬರ್ 28ರ ಸೋಮವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈತ ಮುಖಂಡರ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೋಳ ಖರಿದಿ ಕೇಂದ್ರದ ಬಾಕಿ ಇರುವ ಬಿಲ್ಗಳನ್ನು ಒಂದು ವಾರದೊಳಗೆ ಬಾಕಿ ಇರುವ ರೈತರ ಜೋಳ ಖರೀದಿಯ ಮೊತ್ತವನ್ನು ಪಾವತಿಸಲಾಗುವುದು. ಕಂದಾಯ ಇಲಾಖೆ, ಪೋಲಿಸ್ ಇಲಾಖೆ ಹಾಗೂ ಪಂಚಾಯತ್ ರಾಜ್ ಇಲಾಖೆ ಈ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕೊನೆಯ ಭಾಗದ ರೈತರಿಗೆ ನೀರು ತಲುಪವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ವಿಭಾಗವಾರು ತುಂಗಭದ್ರಾ ಎಡದಂಡೆ ಕಾಲುವೆಯ ಹೂಳು ತೆಗೆಯಲು ಎಷ್ಟಮೆಂಟ್ ಸಲ್ಲಿಸಬೇಕು. ಜಿಲ್ಲೆಯ ಎಲ್ಲಾ ರೈತರು ಸಂಕಷ್ಟದಲ್ಲಿದ್ದಾರೆ ಈ ಸಮಯದಲ್ಲಿ ಮೇಲ್ಭಾಗ ಹಾಗೂ ಕೆಳಭಾಗದ ರೈತರು ಒಗ್ಗಟ್ಟಿನೊಂದಿಗೆ ಸಹಕರಿಸಬೇಕು ಎಂದರು.
ನಾರಾಯಣಪೂರ ಬಲದಂಡೆ ಕಾಲುವೆಯ ಸಮಸ್ಯಗಳನ್ನು ಮುಖ್ಯ ಇಂಜಿನಿಯರ್ ಕೆಬಿಜೆಎನಎಲ್ ಭೀಮರಾಯನಗುಡಿ ಹಾಗೂ ನಾರಾಯಣಪೂರ ಜಲಾಶಯ ಇವರಗಳೊಂದಿಗೆ ಸಭೆ ಮಾಡಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಪಶು ವೈದ್ಯಕೀಯ ಇಲಾಖೆಯಲ್ಲಿರುವ ವೈದ್ಯರ ಹುದ್ದೆ ಖಾಲಿ ಇರುವ ಕುರಿತು ಹಾಗೂ ಇತರೆ ಸಮಸ್ಯೆಗಳ ಕುರಿತು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದರು.
ಮುAಗಾರು ಮಳೆಯ ಅಭಾವದಿಂದ ಜಿಲ್ಲೆಯಲ್ಲಿ ಬರಗಾಲ ಉಂಟಾಗಿದ್ದು, ರೈತರಿಗೆ, ಕೃಷಿ ಕೂಲಿಕಾರರಿಗೆ ತೊಂದರೆಯಾಗದAತೆ ನೋಡಿಕೊಳ್ಳಬೇಕು. ರಾಯಚೂರು ಜಿಲ್ಲೆಯಲ್ಲಿ ಅಲ್ಪಸ್ವಲ್ಪ ಮಳೆಗೆ ರೈತರು ಬಿತ್ತಿದ ತೊಗರಿ, ಹತ್ತಿ, ಸಜ್ಜೆ, ಸೂರ್ಯಕಾಂತಿ ಬೆಳೆಗಳು ನಷ್ಟವಾಗಿದ್ದು, ನಷ್ಟವಾದ ರೈತರು ಕಡ್ಡಾಯವಾಗಿ ಬೆಳೆ ಸರ್ವೆ ಮಾಡಿಸಲು ಸಂಬAಧಿಸಿದ ಅಧಿಕಾರಿಗಳಿಂದ ಸೂಕ್ತ ಕ್ರಮವಹಿಸಬೇಕು. ಅಲ್ಲದೆ ರೈತರಿಗಾದ ಬೆಳೆನಷ್ಟ ಪರಿಹಾರವನ್ನು ವೈಜ್ಞಾನಿಕವಾಗಿ ತುಲನೆ ಮಾಡಿ ಪರಿಹಾರ ವಿತರಿಸಲು ಸೂಕ್ತಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಬರಗಾಲ ಹಿನ್ನಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕು. ಭೂಮಿ ದಾಖಲೆ ಹೊಂದಿದ ಎಲ್ಲಾ ರೈತರಿಗೆ ಬರಪರಿಹಾರ ವಿತರಿಸಲು ಸೂಕ್ತ ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ರಾಯೂಚೂರು ತಾಲೂಕಿಗೆ ದಿನವೊಂದಕ್ಕೆ 9 ರಿಂದ 10 ಗಂಟೆಗಳ ಕಾಲ ವಿದ್ಯುತ್ ಒದಗಿಸಬೇಕು. ಹಾಗೂ ಉಳಿದ ತಾಲೂಕುಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ನೀಡಬೇಕು. ಅಲ್ಲದೆ ಜಿಲ್ಲೆಯ ಎಲ್ಲಾ ರೈತರು ಬೆಳೆ ಸಮೀಕ್ಷೆ ಮಾಡಿಸಲು ಸಂಬAಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ರೈತ ಮುಖಂಡರಿAದ ಮನವಿ: ಬರಗಾಲದವೆಂದು ಘೋಷಣೆ ಮಾಡಿದ ಪ್ರದೇಶದಲ್ಲಿ ರೈತರ ಬೆಳೆನಷ್ಠ ಪರಿಹಾರ ಕೂಡಲೆ ರೈತರ ಖಾತೆಗೆ ಜಮಾ ಮಾಡಬೇಕು. ಮತ್ತು ಧನಕರುಗಳಿಗೆ ಮೇವು ನೀರಿನ ವೈವಸ್ಥೆ ಮಾಡನಬೇಕು. ತುಂಗಭದ್ರ ಎಡದಂಡೆ ನಾಲೆ ಮತ್ತು ನಾರಾಯಣಪುರ ಬಲದಂಡೆ ನಾಲೆಯ ಉಪಖಾಲುವೆಗಳ ಸಿಲ್ಟ್, ಜಂಗಲ್, ತೆಗೆದು ಕೊನೆ ಭಾಗದ ರೈತರಿಗೆ ಸಮರ್ಪಕ ನೀರು ಕೊಡಬೇಕು. ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು. ಜೋಳ ಖರೀದಿ ಕೇಂದ್ರದಲ್ಲಿ ಜೋಳ ಕೊಟ್ಟಂತ ರೈತರಿಗೆ ಕೂಡಲೆ ಹಣ ಬಿಡುಗಡೆ ಮಾಡಬೇಕು. ನಾರಾಯಣಪುರ ಬಲದಂಡೆ ನಾಲೆಯ ವಾರಾಬಂದಿ ಪದ್ಧತಿಯನ್ನು 07 ದಿನ ಬಂದ್ ಮಾಡಿ, 14 ದಿನ ಚಾಲು ಪದ್ಧತಿಯಂತೆ ನೀರು ಹರಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ರೈತರ ಮುಖಂಡರಿAದ ಮನವಿ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಲಿಂಗಸುಗೂರು ಸಹಾಯಕ ಆಯುಕ್ತ ನಾಗೇಂದ್ರ ಬಾಬು ಕುಮಾರ್, ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ್, ಆಹಾರ ಇಲಾಖೆಯ ಉಪ ನಿರ್ದೇಶಕ ನಜೀರ್ ಅಹ್ಮದ್ ಕನವಳ್ಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚವ್ಹಾಣ್, ಪಶು ಇಲಾಖೆಯ ಉಪ ನಿರ್ದೇಶಕ ಪೋಮ್ ಸಿಂಗ್, ಕೆ.ಬಿ.ಜೆ.ಎಲ್. ವಿಭಾಗ ಇಇ ಈಶ್ವರ, ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ ಸೇರಿದಂತೆ ರೈತ ಮುಖಂಡರಾದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಪ್ರಭಾಕರ ಪಾಟೀಲ್ ಇಂಗಳದಾಳ, ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್, ದೊಡ್ಡ ಬಸನಗೌಡ ಬಲ್ಲಟಗಿ, ಸೂಗುರಯ್ಯ ಆರ್.ಎಸ್. ಮಠ, ವೆಂಕಪ್ಪ ಕಾರಬಾರಿ, ಬಸವರಾಜ ಮಾಲಿ ಪಾಟೀಲ್, ಮಲ್ಲಣ ದಿನ್ನಿ, ಹಾಜಿ ಮಸ್ತಾನ್ ಸೇರಿದಂತೆ ಇತರರು ಇದ್ದರು.



