ರಾಯಚೂರು, ಸೆ.17: ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹17 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

2022ರ ಜನವರಿ 21ರಂದು ನಡೆದ ಘಟನೆಗೆ ಸಂಬಂಧಿಸಿದಂತೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ರಾಯಚೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಸಿಂಧನೂರು ಪೀಠವು ಸೆ.2ರಂದು ಆರೋಪಿಗೆ ಶಿಕ್ಷೆ ವಿಧಿಸಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮಂಜುನಾಥ ಬೇಲೇರಿ ವಾದ ಮಂಡಿಸಿದ್ದರು.