ಲಿಂಗಸುಗೂರು: ಪಟ್ಟಣದ ಪುರಸಭೆ ವ್ಯಾಪ್ತಿಗೆ ಒಳಪಡುವ ಕಸಬಾ ಲಿಂಗಸುಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಶಾಲೆಯ ಮುಖ್ಯಗುರು ಸುಲೋಚನಾ ಅವರು ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸುವ ಮೂಲಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕನ್ನಡ ನಾಡಿನ ಶ್ರೀಮಂತ ಇತಿಹಾಸ, ಭಾಷೆ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಮೂಡಿಸುವುದರ ಜೊತೆಗೆ ನಾಡಿನ ಪರಂಪರೆ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಪರಿಚಯಿಸುವುದು ಅಗತ್ಯವಾಗಿದೆ ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ಸಾರಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಜಯಶ್ರೀ, ಗೀತಾ, ದುಂಡಮ್ಮ, ಶಾಂತಾ, ಸರಸ್ವತಿ, ಗುರುಸಂಗಯ್ಯ, ಸಿದ್ದಪ್ಪ, ಮಲ್ಲಿಕಾರ್ಜುನ ಗೌಡ, ಈರಮ್ಮ ಸೇರಿದಂತೆ ಅತಿಥಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.