ರಾಯಚೂರು ಅ. 12 (ಕರ್ನಾಟಕ ವಾರ್ತೆ): ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಜ್ಞಾನ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಪ್ರಾಯೋಗಿಕ ಜ್ಞಾನವನ್ನು ವೃದ್ಧಿಸುವ ಉದ್ದೇಶದಿಂದ ಶಿಲ್ಪಾ ಫೌಂಡೇಶನ ವತಿಯಿಂದ ಶಿಲ್ಪಾ ಮೆಡಿಕೇರ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾದ ವಿಷ್ಣುಕಾಂತ್ ಭೂತಡಾ ಅವರು 9,19,616 ಮೌಲ್ಯದ ಪ್ರಯೋಗಾಲಯ ಉಪಕರಣಗಳನ್ನು ಅಕ್ಟೋಬರ್ 12ರ ಸೋಮವಾರ ದಂದು ಕೊಡುಗೆಯಾಗಿ ನೀಡಿದರು.
ಈ ವೇಳೆ ವಿಷ್ಣುಕಾಂತ್ ಶಿಲ್ಪಾ ಮೆಡಿಕೇರ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರಾದ ವಿಷ್ಣುಕಾಂತ್ ಭೂ ಅವರು ಮಾತನಾಡಿ, ಶಿಕ್ಷಣದ ಮಹತ್ವ, ಜ್ಞಾನದ ಸದ್ಬಳಕೆ ಹಾಗೂ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಉದ್ಯಮಿಗಳು ಕೈಜೋಡಿಸಿದಾಗ ಗುಣಮಟ್ಟದ ಶಿಕ್ಷಣದ ದೊರೆಯುತ್ತದ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಯಂಕಣ್ಣ ವಹಿಸಿ, ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಜೊತೆಗೆ ಉತ್ತಮ ಪ್ರಯೋಗಾಲಯ ಸೌಲಭ್ಯಗಳೂ ನಿರ್ಣಾಯಕ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಶ್ರೀ ವಿಷ್ಣುಕಾಂತ್ ಭೂತಡಾ ಅವರ ಕೊಡುಗೆ ಕಾಲೇಜಿನ ವಿಜ್ಞಾನ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆಯನ್ನು ಬಲಪಡಿಸುವುದರ ಜೊತೆಗೆ ಸಮಾಜಮುಖಿ ಉದ್ಯಮಶೀಲತೆಗೆ ಸ್ಫೂರ್ತಿದಾಯಕ ಉದಾಹರಣೆಯಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಐಕ್ಯೂಎಸಿ ಸಂಯೋಜಕ ಡಾ. ಮಹಾಂತೇಶ ಅಂಗಡಿ, ವಿಜ್ಞಾನ ವಿಭಾಗದ ಡೀನ್ ಡಾ. ಸೋಮನಾಥ ರೆಡ್ಡಿ ಸಿ.ಪಾಟೀಲ್ ಹಾಗೂ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ವಿಜಯಶ್ರೀ ಪಾಟೀಲ್ ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಬಿ.ಎಸ್ಸಿ. ಐದನೇ ಸೆಮಿಸ್ಟರ್ ವಿದ್ಯಾರ್ಥಿನಿ ಸಿಂಧು ಹಲ್ಲೋರ್ ಪ್ರಾರ್ಥನಾ ಗೀತೆ ಹಾಡಿದರು. ರಸಾಯನಶಾಸ್ತ್ರ ವಿಭಾಗದ ಡಾ.ಹನುಮೇಶ ಸ್ವಾಗತಿಸಿದರು. ರಾಜಕೀಯ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಶಿವರಾಜ್ ಕೊಪ್ಪರ ಅತಿಥಿಗಳನ್ನು ಪರಿಚಯಿಸಿದರು. ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಡಾ. ರವಿ ಎಂ. ವಂದಿಸಿದರು.



