ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಅಸ್ಪೃಶ್ಯತೆ ಆಚರಣೆಗಳಿಗೆ ಸಂಬಂಧಿಸಿದ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಬಿ.ಆರ್. ಭಾಸ್ಕರ್ ಪ್ರಸಾದ್ ಹೇಳಿದರು.
ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ರಕ್ಷಣೆಯನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಎಸ್ಸಿಪಿ-ಟಿಎಸ್ಪಿ ಅನುದಾನವನ್ನು ದಲಿತ ಸಮುದಾಯಗಳ ಅಭಿವೃದ್ಧಿಗಾಗಿಯೇ ಸಮರ್ಪಕವಾಗಿ ಬಳಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.



