ರಾಯಚೂರು, ಸೆ.19: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ 2026–27ನೇ ಸಾಲಿನ ರಾಯಚೂರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಯೋಗ ಸ್ಪರ್ಧೆಯಲ್ಲಿ ಬಸವಶ್ರೀ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸೆ.18ರಂದು ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ರವಿತೇಜ ಪ್ರಥಮ ಸ್ಥಾನ ಪಡೆದರೆ, ಸಾನ್ವಿಕಾ ಹಾಗೂ ನಿಹಾರಿಕಾ ದ್ವಿತೀಯ ಸ್ಥಾನ ಮತ್ತು ನಿವೇದಿತಾ ತೃತೀಯ ಸ್ಥಾನ ಪಡೆದು ವಿಜೇತರಾಗಿದ್ದಾರೆ.
ವೈಯಕ್ತಿಕ ಯೋಗ, ಸಾಂಪ್ರದಾಯಿಕ ಯೋಗ ಹಾಗೂ ಕಲಾತ್ಮಕ ಯೋಗ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಪತ್ರಗಳನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.



