ದೇವದುರ್ಗ: ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಸ್ವಾತಂತ್ರ್ಯ ಹೋರಾಟಗಾರ ದಿ. ರಾಜಶೇಖರಪ್ಪ ಆದಿ ಅವರ ಪತ್ನಿ ಕಮಲಮ್ಮ ಅವರನ್ನು ಸನ್ಮಾನಿಸಲಾಯಿತು. ನಿಜಾಮರ ಆಡಳಿತದ ವಿರುದ್ಧ ಹೋರಾಟ ನಡೆಸಿದ ಮಹನೀಯರ ತ್ಯಾಗವನ್ನು ಸ್ಮರಿಸುವ ಉದ್ದೇಶದಿಂದ ಅವರ ಕುಟುಂಬಕ್ಕೆ ಗೌರವ ಸಲ್ಲಿಸಲಾಯಿತು. ಈ ವೇಳೆ ನೆರೆದಿದ್ದವರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿನಿಯರಿಂದ ನಾಡಗೀತೆ ಹಾಗೂ ರಾಷ್ಟ್ರಗೀತೆಯನ್ನು ಅಚ್ಚುಕಟ್ಟಾಗಿ ಹಾಡಿಸಲು ನಿರಂತರವಾಗಿ ತರಬೇತಿ ಮತ್ತು ಮಾರ್ಗದರ್ಶನ ನೀಡುತ್ತಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಮಮತಾ ಆದಿ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ಶಾಸಕಿ ಕರೆಮ್ಮ ಜಿ. ನಾಯಕ ಅವರು ಕಮಲಮ್ಮ ಹಾಗೂ ಮಮತಾ ಆದಿ ಅವರಿಗೆ ಶಾಲು ಹೊದಿಸಿ, ಹಾರ ಹಾಕಿ ಗೌರವಿಸಿದರು.
ಈ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಯೋಜನೆ ಅಧ್ಯಕ್ಷ ಲಕ್ಷ್ಮಣ ಜ್ಯೋತಿ, ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ರಾಧಾದೇವಿ, ಪುರಸಭೆ ಮುಖ್ಯಾಧಿಕಾರಿ ಹಂಪಯ್ಯ ಕೆ., ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನರಸಿಂಗರಾವ್ ಸರಕೀಲ್, ಪ್ರಧಾನ ಕಾರ್ಯದರ್ಶಿ ಬಸವರಾಜ ಬ್ಯಾಗವಾಟ, ಕ್ಷೇತ್ರ ಸಮನ್ವಯಾಧಿಕಾರಿ ಶಿವರಾಜ ಪೂಜಾರಿ, ಸಮಾಜ ಕಲ್ಯಾಣ ಅಧಿಕಾರಿ ರಾಜಕುಮಾರ ಡೋಣಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಬಾಲಪ್ಪ ಭಾವಿಮನಿ, ಎಇಇ ಹೀರಾಲಾಲ್, ವಿಜಯಕುಮಾರ ರಾಠೋಡ್, ಶ್ರೀನಿವಾಸ, ದೈಹಿಕ ಶಿಕ್ಷಕ ರಂಗನಾಥ ಚಲುವಾದಿ, ಸಿಆರ್ಪಿ ದಾಕ್ಷಾಯಿಣಿ ಬಿ. ಪಾಟೀಲ್, ಕಂದಾಯ ಇಲಾಖೆಯ ಅಭಿಷೇಕ ಹುಡೇದ್, ಪ್ರವೀಣ, ರವಿಕುಮಾರ ಸುರಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



