ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಮಾನ್ವಿ, ಸಿರವಾರ ಹಾಗೂ ಸಿಂಧನೂರು ತಾಲೂಕುಗಳನ್ನು ಇನ್ನೂ ಅಧಿಕೃತವಾಗಿ ಬರಪೀಡಿತ ಪಟ್ಟಿಗೆ ಸೇರಿಸಿಲ್ಲ ಎಂದು ಕರ್ನಾಟಕ ರೈತ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಿ.ಎಸ್. ಪೂಜಾರ್ ಹೇಳಿದರು.

ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಖುಷ್ಕಿ ಬೆಳೆಗೆ ಪ್ರತಿ ಎಕರೆಗೆ ₹30 ಸಾವಿರ ಹಾಗೂ ನೀರಾವರಿ ಬೆಳೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಗ್ರಾಮೀಣ ಭಾಗದ ಕೂಲಿಕಾರ್ಮಿಕರಿಗೆ ವರ್ಷಪೂರ್ತಿ ಉದ್ಯೋಗ, ಜಾನುವಾರುಗಳಿಗೆ ಉಚಿತ ಮೇವು ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.