ತಾಲೂಕಿನ ಐದನಾಳ ಗ್ರಾಮದ ಎಸ್ಸಿ ವಾರ್ಡ್ನಲ್ಲಿ ಕಳೆದ ನಾಲ್ಕು ತಿಂಗಳಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಸಮಸ್ಯೆ ಪರಿಹಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ದಲಿತ ಮಹಿಳೆಯರು ಕಾಳಾಪೂರ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮುಖ್ಯ ರಸ್ತೆಯಲ್ಲೇ ಚರಂಡಿಯ ಕೊಳಚೆ ನೀರು ನಿರಂತರವಾಗಿ ಹರಿಯುತ್ತಿರುವುದರಿಂದ ವಯೋವೃದ್ಧರು, ಮಹಿಳೆಯರು, ಮಕ್ಕಳು ಹಾಗೂ ಗರ್ಭಿಣಿಯರು ಸಂಚರಿಸಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಪಿಡಿಒ ಕೂಡಲೇ ವಾರ್ಡ್ಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ, ಚರಂಡಿಯನ್ನು ಸ್ವಚ್ಛಗೊಳಿಸಿ ಸುಗಮ ನೀರು ಹರಿವಿಗೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.



