ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ 41ನೇ ಪತ್ರಕರ್ತರ ಸಮ್ಮೇಳನದ ಪೂರ್ವ ಸಿದ್ಧತೆಗಳ ಕುರಿತು ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ್ ಅವರನ್ನು ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ಚರ್ಚಿಸಿದರು.
ಇತ್ತೀಚೆಗೆ ನಗರದ ಅವರ ಕಚೇರಿಯಲ್ಲಿ ಭೇಟಿ ಮಾಡಿದ ಪದಾಧಿಕಾರಿಗಳು, ಸಮ್ಮೇಳನದ ಆಯೋಜನೆ, ಅಗತ್ಯ ಸಿದ್ಧತೆಗಳು ಹಾಗೂ ಸಹಕಾರದ ಕುರಿತು ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ್, ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಯಾಗಿ ನಡೆಯಲು ಅಗತ್ಯವಿರುವ ಯಾವುದೇ ಸಹಾಯ ಮತ್ತು ಸಹಕಾರ ನೀಡಲು ತಾವು ಸಿದ್ಧರಾಗಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಆರ್. ಗುರುನಾಥ, ಪ್ರಧಾನ ಕಾರ್ಯದರ್ಶಿ ಸಿದ್ಧಯ್ಯ ಸ್ವಾಮಿ, ರಾಜ್ಯ ಸಮಿತಿ ಸದಸ್ಯ ಬಸವರಾಜ್ ನಾಗಡದಿನ್ನಿ, ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ್ ಜಾಗಟಗಲ್, ಹಿರಿಯ ಪತ್ರಕರ್ತ ಶಿವಮೂರ್ತಿ ಹಿರೇಮಠ, ಸಂಘದ ಉಪಾಧ್ಯಕ್ಷ ಮಹಾನಂದ ನಾಯಕ, ಕಾರ್ಯಕಾರಿ ಸಮಿತಿ ಸದಸ್ಯರಾದ ಸುರೇಶ ರೆಡ್ಡಿ, ನೀಲಕಂಠ ಸ್ವಾಮಿ, ಪ್ರಸನ್ನ ಜೈನ್, ಪತ್ರಕರ್ತರಾದ ಸತೀಶ್ ಹಿರೇಮಠ, ಅಣ್ಣಪ್ಪ ಮೇಟಿ ಗೌಡ, ಸಂಘದ ಸದಸ್ಯರಾದ ಖಾದರ್, ಮೊಹ್ಮದ್ ಜಿಲಾನಿ, ಕೃಷ್ಣ ಇನಂದಾರ್, ಮಂಜು ಎತ್ತಿನಮಾಳಗಿ, ಬಾಲು ಸೇರಿದಂತೆ ಇತರರು ಉಪಸ್ಥಿತರಿದ್ದರು.



