ರಾಯಚೂರು. ಸೆ.18: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮಮತಾ ದರ್ಬಾರಿ ಗಂಡ ಪ್ರಭು ಅವರನ್ನ ನೇಮಕ ಮಾಡಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯಾಧ್ಯಕ್ಷರಾದ ಎಮ್.ವಿಜಯ್ ನಾಯಕ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಸನ್ಮಾನ್ಯ ಮದನ್ ಪಟೇಲ್ ಅವರ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಸಿ.ನರೇಂದ್ರ ಅವರ ಶಿಫಾರಸ್ಸಿನ ಮೇರೆಗೆ ಪರಿಶಿಷ್ಟ ಪಂಗಡದ ರಾಜ್ಯ ಪ್ರಧಾನ ಕಾರ್ಯದರ್ಶಿಯ ಹುದ್ದೆಗೆ ನೇಮಕ ಮಾಡಿ ಆದೇಶಿಸಲಾಗಿದೆ.
ತಮಗೆ ವಹಿಸಲಾದ ಹೊಣೆಗಾರಿಕೆಯನ್ನು ನಿಷ್ಠಯಿಂದ ನಿರ್ವಹಿಸುತ್ತಾ ರಾಜ್ಯ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಗಿ ನಿರ್ವಹಿಸಿ ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.



