ತುಂಗಾ ಬಿಂಬ/ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ವಿಜಯ ರಾವ್ ಕುಪನೇಶಿ ರಚಿಸಿರುವ ‘ಮಾನ್ವಿಯ ಸ್ವಾತಂತ್ರ್ಯ ಹೋರಾಟಗಾರರು’ ಕೃತಿಯನ್ನು ಶಾಸಕ ಹಂಪಯ್ಯ ನಾಯಕ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹಂಪಯ್ಯ ನಾಯಕ, ಮಾನ್ವಿ ತಾಲೂಕಿನ ಅನೇಕ ದೇಶಭಕ್ತರು ಹಾಗೂ ಮಹನೀಯರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಹಾಗೂ ನಂತರ ಕಲ್ಯಾಣ ಕರ್ನಾಟಕ ವಿಮೋಚನೆಗಾಗಿ ಹೈದರಾಬಾದ್ ನಿಜಾಮರ ಆಡಳಿತದ ವಿರುದ್ಧ ಹೋರಾಟ ನಡೆಸಿದ್ದಾರೆ. ನಿವೃತ್ತ ಪ್ರಾಚಾರ್ಯರಾದ ಡಾ. ವಿಜಯ ರಾವ್ ಕುಪನೇಶಿ ಅವರು ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ, ಮುಂದಿನ ಪೀಳಿಗೆಗೆ ಮಾನ್ವಿ ತಾಲೂಕಿನ ಇತಿಹಾಸವನ್ನು ಪರಿಚಯಿಸುವ ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಡಾ. ವಿಜಯ ರಾವ್ ಕುಪನೇಶಿ ಅವರು ‘ಮಾನ್ವಿಯ ಸ್ವಾತಂತ್ರ್ಯ ಹೋರಾಟಗಾರರು’ ಕೃತಿಯ ಕುರಿತು ಮಾತನಾಡಿ, ಕೃತಿ ರಚನೆಯ ಉದ್ದೇಶ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಮಾನ್ವಿ ತಾಲೂಕಿನ ಹೋರಾಟಗಾರರ ಪಾತ್ರದ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಬ್ದುಲ್ ಗಾಫುರ್ ಸಾಬ್, ತಾಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಕೆ. ಅಮರೇಶಪ್ಪ ವಕೀಲರು, ಪಿಐ ಸೋಮಶೇಖರ್ ಎಸ್. ಕೆಂಚರೆಡ್ಡಿ, ತಹಶೀಲ್ದಾರ್ ಭೀಮರಾಯ ರಾಮಸಮುದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.