ದೇವದುರ್ಗ: ಪಟ್ಟಣದ ಬಸವ ಕಾಲೇಜಿನ ಉಪನ್ಯಾಸಕ ಮಲ್ಲೇಶ್ವರಯ್ಯ ನುಲಿ ಅವರು ರಾಯಚೂರು ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಹನುಮಂತರಾಯ ತಿಳಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಮಲ್ಲೇಶ್ವರಯ್ಯ ನುಲಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಸೆ.19ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ. ಮಲ್ಲೇಶ್ವರಯ್ಯ ನುಲಿ ಅವರು ಪ್ರಶಸ್ತಿಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ವಿರೂಪಾಕ್ಷಪ್ಪ ಗೌಡ, ಗೌರವ ಸಲಹೆಗಾರ ತಿರುಪತಿ ಸೂಗೂರು, ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.



