ತುಂಗ ಬಿಂಬ/ಕಲ್ಮಲಾ (ರಾಯಚೂರು): ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಪ್ರಯುಕ್ತ ಸ್ಥಳೀಯ ಶಾಲೆಯ ವಿದ್ಯಾರ್ಥಿಗಳಿಗೆ 70 ನೋಟ್ಬುಕ್ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ. ನಾಗರಾಜ್ ಮಾತನಾಡಿ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ನೋಟ್ಬುಕ್ಗಳನ್ನು ವಿತರಿಸಲಾಗಿದೆ. ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಹೆಚ್ಚಿಸಿ, ಶೈಕ್ಷಣಿಕ ಚಟುವಟಿಕೆಗಳಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಈ ಸಣ್ಣ ಪ್ರಯತ್ನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಶಿಕ್ಷಣದತ್ತ ಹೆಚ್ಚಿನ ಆಸಕ್ತಿ ತೋರಿಸಿ ಉತ್ತಮ ಸಾಧನೆ ಮಾಡಬೇಕು. ಜೊತೆಗೆ ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಐತಿಹಾಸಿಕ ಮಹತ್ವವನ್ನು ಅರಿತು, ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಸುಮಲತಾ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಿಸಿದ ಕಾರ್ಯವನ್ನು ಅಭಿನಂದಿಸಿದರು.



