ಜಾಲಹಳ್ಳಿ: ದೇವದುರ್ಗ ತಾಲೂಕಿನ ಬಸವ ಪ್ರೌಢಶಾಲೆಯಲ್ಲಿ ವಿಜ್ಞಾನ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದೇವರಾಜ ಭೈರಪ್ಪ ಅವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಜಾಲಹಳ್ಳಿಯ ಜೆ.ಜೆ. ಕಲ್ಯಾಣ ಮಂಟಪದಲ್ಲಿ ಶನಿವಾರ ಮಧ್ಯಾಹ್ನ ನಡೆದ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಿದರು.
ಎಂ.ಎಸ್ಸಿ., ಬಿ.ಎಡ್. ಹಾಗೂ ಟಿಇಟಿ ವಿದ್ಯಾರ್ಹತೆ ಹೊಂದಿರುವ ದೇವರಾಜ ಅವರು ಬಸವ ಪ್ರೌಢಶಾಲೆಯಲ್ಲಿ ವಿಜ್ಞಾನ ಸಹ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಬೋಧನಾ ಕ್ಷೇತ್ರದಲ್ಲಿನ ಬದ್ಧತೆ ಹಾಗೂ ಶಿಕ್ಷಣ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ಸ್ವೀಕರಿಸಿದ ದೇವರಾಜ ಅವರನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು, ಶಿಕ್ಷಕರು, ಶಿಕ್ಷಣಾಭಿಮಾನಿಗಳು ಹಾಗೂ ಸಾರ್ವಜನಿಕರು ಅಭಿನಂದಿಸಿ ಶುಭ ಹಾರೈಸಿದರು.



