ಕೊಪ್ಪಳ: ಸಮೀಪದ ಭಾಗ್ಯನಗರದ ನಿವಾಸಿ, ನಿವೃತ್ತ ಶಿಕ್ಷಕ ಮಲ್ಲನಗೌಡ ಪಾಟೀಲ (85) ಅವರು ಶನಿವಾರ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಮೃತರು ಪತ್ನಿ ಹಾಗೂ ಓರ್ವ ಪುತ್ರರನ್ನು ಅಗಲಿದ್ದಾರೆ. ಎಸ್ಎಫ್ಎಸ್ ಶಾಲೆಯ ಶಿಕ್ಷಕ ಸಂಗಮೇಶ ಪಾಟೀಲ್ ಅವರ ತಂದೆಯಾಗಿದ್ದರು.
ಮೃತರ ಅಂತ್ಯಕ್ರಿಯೆ ಕೊಪ್ಪಳ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು.



