ರಾಯಚೂರು, ಸೆ.20: ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆ. ಶಾಂತಪ್ಪ ಅವರು ಭಾನುವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಧಿಕಾರ ಸ್ವೀಕರಿಸಿ ಕಾರ್ಯಾರಂಭ ಮಾಡಿದರು. ಇತ್ತೀಚೆಗೆ ಪ್ರಕಟವಾದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಗೆ ಕೆ. ಶಾಂತಪ್ಪ ಅವರನ್ನು ನೇಮಕ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನೂತನ ಜಿಲ್ಲಾಧ್ಯಕ್ಷ ಕೆ. ಶಾಂತಪ್ಪ ಅವರಿಗೆ ಶುಭ ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ರಾಜ್ಯ ಯುವ ಕಾಂಗ್ರೆಸ್ ಮುಖಂಡ ರವಿ ಭೋಸರಾಜು, ಮುಖಂಡರಾದ ಜಿ. ಶಿವಮೂರ್ತಿ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ, ಎನ್. ಶ್ರೀನಿವಾಸರೆಡ್ಡಿ, ಆಂಜನೇಯ ಕುರುಬದೊಡ್ಡಿ, ಜಿ. ತಿಮ್ಮಾರೆಡ್ಡಿ, ಬಸವರಾಜ ಪಾಟೀಲ್ ಅತ್ತನೂರು, ತಾಯಣ್ಣಗೌಡ, ಮ್ಯಾದಾರ ಲಕ್ಷ್ಮಣ, ಜಾಫರ್ ಅಹ್ಮದ್ ಸೇರಿದಂತೆ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.