ಹಿರೇಕೊಟ್ನೇಕಲ್, ಸೆ.21: ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟದ ಖೋ-ಖೋ ಪಂದ್ಯದಲ್ಲಿ ಹಿರೇಕೊಟ್ನೇಕಲ್ ಹರಿಜನವಾಡ ಪ್ರಾಥಮಿಕ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.

ಸೋಮವಾರ ಪೋತ್ನಾಳ ಪ್ರೌಢಶಾಲಾ ಮೈದಾನದಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಹರಿಜನವಾಡ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉತ್ತಮ ಕ್ರೀಡಾ ಕೌಶಲ್ಯ, ತಂಡದ ಒಗ್ಗಟ್ಟು ಹಾಗೂ ಕ್ರೀಡಾಸ್ಫೂರ್ತಿ ಪ್ರದರ್ಶಿಸಿ ಗಮನ ಸೆಳೆದರು. ಖೋ-ಖೋ ಪಂದ್ಯದಲ್ಲಿ ಎದುರಾಳಿ ತಂಡಗಳ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಎಸ್‌ಡಿಎಂಸಿ ಅಧ್ಯಕ್ಷ ವೆಂಕಟೇಶ್ ನಾಯಕ, ಉಪಾಧ್ಯಕ್ಷೆ ಲಕ್ಷ್ಮಿ ದೇವಣ್ಣ, ಎಸ್‌ಡಿಎಂಸಿ ಸರ್ವ ಸದಸ್ಯರು, ಶಾಲೆಯ ಮುಖ್ಯಗುರು ರಾವುತರಾವ್ ಬರೂರ, ಕ್ರೀಡಾ ಮ್ಯಾನೇಜರ್ ಶಿವಗ್ಯಾನಿ, ತರಬೇತುದಾರ ಶಿಕ್ಷಕ ಪ್ರಕಾಶ ಜಿ.ಕೆ., ಶಾಲೆಯ ಶಿಕ್ಷಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಮತ್ತಷ್ಟು ಯಶಸ್ಸು ಸಾಧಿಸಲಿ ಎಂದು ಶಾಲಾ ಕುಟುಂಬ ಶುಭ ಹಾರೈಸಿದೆ.