ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಹಾಗೂ ವೃದ್ಧರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಅರ್ಹ ಫಲಾನುಭವಿಗಳು ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿದ್ದರಾಮಪ್ಪ ಕಲ್ಯಾಣರಾವ್ ಅವರು ಹೇಳಿದರು. ಸೆಪ್ಟಂಬರ್ 22ರ ಬುಧವಾರ ದಂದು ರಾಯಚೂರು ತಾಲೂಕಿನ ಮಟಮಾರಿ ಗ್ರಾಮದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಸಂಯೋಗದಲ್ಲಿ ಮೆಗಾ ಡ್ರೆöÊವ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರತಿಯೊಬ್ಬರು ಕಾನೂನುಗಳನ್ನು ಅರಿತುಕೊಳ್ಳಬೇಕು. ಮಹಿಳೆಯರಿಗಾಗಿ ಆನೇಕ ಕಾನೂನುಗಳಿವೆ ಅವುಗಳನ್ನು ಸರಿಯಾಗಿ ಅಧ್ಯಯನ ಮಾಡಬೇಕೆಂದರು. ರಾಯಚೂರು ತಾಲ್ಲೂಕಿನ ಮಟಮಾರಿ ಗ್ರಾಮವನ್ನು ಎನ್ಎಎಲ್ಎಸ್ಎ ಯೋಜನೆಯಡಿ ಆಯ್ಕೆ ಮಾಡಿಕೊಂಡಿದ್ದು, ಈಗಾಗಲೇ ಮಟಮಾರಿ ಗ್ರಾಮದ ಜನರಿಗೆ ಯೋಜನೆಗಳಲ್ಲಿ ಸಂಬAಧಪಟ್ಟ ಇಲಾಖೆಗಳ ಮುಖಾಂತರ ಸರ್ವೆ ಮಾಡಿದ ಪಲಾನುಭವಿಗಳಿಗೆ 171 ಆಯುಷ್ಯ ಮಾನ್ ಭಾರತ್ ಕಾರ್ಡ್, 36 ವೃದ್ಧಾಫ್ಯ ವೇತನ, 4 ಆಧಾರ್ ಕಾರ್ಡ್, 21 ವಿಧವಾ ವೇತನ, 61 ಕಾರ್ಮಿಕ ಕಾರ್ಡ್, 38 ವಾಹನ ಚಾಲನೆ ಕಲಿಕಾ ಪರವಾನಗೆಗಳನ್ನು ವಿತರಿಸಲಾಗಿದೆ ಎಂದರು. ಇದೇ ಸಂದರ್ಭದಲ್ಲಿ ರಾಯಚೂರು ತಾಲೂಕು ಪಂಚಾಯತಿಯ ಕಾರ್ಯನಿರ್ವಹಕ ಅಧಿಕಾರಿ ಚಂದ್ರಶೇಖರ ಪವಾರ್, ತಹಶೀಲ್ದಾರ್ ಕಚೇರಿಯ ಶಿರಸ್ತೆದಾರರು, ಮಾಟಮಾರಿ ಗ್ರಾ.ಪಂ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.



