ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2026-27ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳಾದ ಆಧಾರ್ ಯೋಜನೆ, ಸಾಧನೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ ಯೋಜನೆ, ಶಿಶುಪಾಲನೆ ಭತ್ಯ ಯೋಜನೆ, ಮರಣ ಪರಿಹಾರ ನಿಧಿ ಯೋಜನೆ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೃಷ್ಟಿದೋಷ ಹೊಂದಿದ ವಿಕಲಚೇತನರಿಗೆ ಬ್ರೆöÊಲ್ ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನೆ-ಸಲಕರಣೆ ಯೋಜನೆ, ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ಚೇರ್ ಯೋಜನೆಗಳಿಗೆ ಜಿಲ್ಲಾ ವ್ಯಾಪ್ತಿಯ ಅರ್ಹ ವಿಕಲಚೇತನ ಫಲಾನುಭವಿಗಳು ಆನ್ಲೈನ್ ಸೇವಾಸಿಂಧು ತಂತ್ರಾAಶದ (ಪೋರ್ಟಲ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಗ್ರಾಮ ಓನ್, ಕರ್ನಾಟಕ ಓನ್, ಬೆಂಗಳ್ರರು ಓನ್ ಹಾಗೂ https://sevaone.karnataka.gov.in/ ನಲ್ಲಿ ಮುಖಾಂತರ ಸೆಪ್ಟಂಬರ್ 30ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಕಟ್ಟಡ ಮ.ನಂ: 1-3-1411/4 ಆಶಾಪೂರು ರಸ್ತೆ, ಆಫೀರ್ಸ್ ಕಾಲೋನಿ ಎದುರುಗಡೆ ಶ್ರೀ ರಾಜಾಮಾತಾ ದೇವಸ್ಥಾನ ಹತ್ತಿರ, ರಾಯಚೂರು ರಾಯಚೂರು ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ:-08532-200992ರವರನ್ನು ಕಚೇರಿ ಕೆಲಸದ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು, ನಗರ ಪ್ರದೇಶದಲ್ಲಿ ನಗರ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಮಾರ್ಗದರ್ಶನ ಪಡೆದು ಇಲಾಖೆಯ ಯೋಜನೆಗಳಿಗೆ ಸಂಬAಧಿಸಿದAತೆ ಆನ್ಲೈನ್ ತಂತ್ರಾAಶದಲ್ಲಿ ಸಲ್ಲಿಸಿದ ಅರ್ಜಿಯನ್ನು ಸಂಬAಧಪಟ್ಟ ದಾಖಲೆಗಳೊಂದಿಗೆ ಹಾರ್ಡ್ ಪ್ರತಿಯೊಂದಿಗೆ ಅರ್ಜಿಗಳನ್ನು ಈ ಇಲಾಖೆಗೆ ಅಥವಾ ಆಯಾ ತಾಲ್ಲೂಕಿನ ಸಂಬAಧಪಟ್ಟ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



