ರಾಯಚೂರು ಸೆಪ್ಟಂಬರ್ 24 (ಕರ್ನಾಟಕ ವಾರ್ತೆ): ಮಾನವಿ ನಗರ ಯೋಜನಾ ಪ್ರಾಧಿಕಾರ ಸ್ಥಳಿಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಸಿದ್ದಪಡಿಸಿದಲಾಗಿರುವ ಜಿಐಎಸ್ ಆಧಾರಿತ ರೋಡ್ ನೆಟ್ವರ್ಕ್ ಗ್ರಿಡ್ ಪ್ಲಾನ್ ನಕ್ಷೆಯನ್ನು ಈ ಕಚೇರಿಯಲ್ಲಿ ಹಾಗೂ ಮಾನವಿ ಪುರಸಭೆ ಕಚೇರಿಯಲ್ಲಿ ಸಾರ್ವಜನಿಕ ವಿಕ್ಷಣೆಗಾಗಿ ಇರಿಸಲಾಗಿದ್ದು, ಸಾರ್ವಜನಿಕರು ತಮ್ಮ ಸಲಹೆ/ಸೂಚನೆಗಳು ಅಥವಾ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಸಲ್ಲಿಸಬಹುದಾಗಿದೆ ಎಂದು ಕೋರಲಾಗಿದೆ. ರಾಜ್ಯದಲ್ಲಿ ಸ್ಥಳೀಯ ಯೋಜನಾ ಪ್ರದೇಶಗಳಲ್ಲಿನ ಅನುಮೋದಿತ ಮಹಾಯೋಜನೆ ಹೊಂದಿರುವ ಹಾಗೂ ಮಹಾಯೋಜನೆ ತಯಾರಿಕೆ ವಿವಿಧ ಹಂತಗಳಲ್ಲಿರುವ ನಗರ ಅಥವಾ ಪಟ್ಟಣಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 76-ಕೆ ರಡಿಯಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸದರಿ ಕಾಯ್ದೆಯ ಕಲಂ 12(1)(ಬಿ) ರಂತೆ ತಯಾರಿಸಿರುವ ಜಿಐಎಸ್ ಆಧಾರಿತ ರೋಡ್ ನೆಟ್ವರ್ಕ್ ಗ್ರಿಡ್ ಪ್ಲಾನ್‌ಗೆ ಈ ಕಾಯ್ದೆಯ ಕಲಂ 13(1) ರಡಿಯಲ್ಲಿ ಸರ್ಕಾರದ ಆದೇಶ ಸಂಖ್ಯೆ:ನಅಇ 358 2026(ಇ) ದಿನಾಂಕ:09-09-2026 ರಲ್ಲಿ ತಾತ್ಕಾಲಿಕ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ ಬಾಧಿತರಾಗಬಹುದಾದ ಸಾರ್ವಜನಿಕರು ತಮ್ಮ ಸಲಹೆ/ಸೂಚನೆಗಳು ಅಥವಾ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಈ ಪ್ರಕಟಣೆಯು ದಿನ ಪತ್ರಿಕೆಯಲ್ಲಿ ಪ್ರಕಟಗೊಂಡ ದಿನಾಂಕದಿAದ 60 ದಿನಗಳ ಒಳಗಾಗಿ ಈ ಕಚೇರಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಅಥವಾ ಇ-ಮೇಲ್ ಮೂಲಕ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ನಿಗಧಿತ 60 ದಿನಗಳ ಅವಧಿಯೊಳಗೆ ಸ್ವೀಕರಿಸಲ್ಪಟ್ಟ ಸಲಹೆ, ಸೂಚನೆಗಳು ಹಾಗೂ ಆಕ್ಷೇಪಣೆಗಳನ್ನು ಮಾತ್ರ ಪರಿಗಣಿಸಲಾಗುವುದು ಸದರಿ ಅವಧಿ ಮುಕ್ತಾಯಗೊಂಡ ನಂತರ ಸ್ವೀಕರಿಸಲ್ಪಡುವ ಯಾವುದೇ ಸಲಹೆ, ಸೂಚನೆ ಅಥವಾ ಆಕ್ಷೆಪಣೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ಮಾನವಿ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.