ಲಿಂಗಸುಗೂರು: ಪಟ್ಟಣದ ವಿಜಯ ಮಹಾಂತೇಶ್ವರ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಟ್ಟಿ ಚಿನ್ನದ ಗಣಿ ವಿನಾಯಕ ವಿದ್ಯಾ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಅಶೋಕ್ ವಿ. ಕರಡಕಲ್ ಅವರಿಗೆ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಯಚೂರು ಜಿಲ್ಲಾ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ರಿ.) ವತಿಯಿಂದ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಶೋಕ್ ವಿ. ಕರಡಕಲ್ ಅವರ ಶೈಕ್ಷಣಿಕ ಸೇವೆ ಹಾಗೂ ಸಾಧನೆಗಳನ್ನು ಗುರುತಿಸಿ ಗೌರವಿಸಲಾಯಿತು.

ವಿನಾಯಕ ವಿದ್ಯಾ ಸಂಸ್ಥೆಯ ಅಧ್ಯಕ್ಷರು ಅಶೋಕ್ ವಿ. ಕರಡಕಲ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಅವರ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದರು.