ರಾಯಚೂರು, ಸೆ.27: ತೆಲಂಗಾಣದ ಮಕ್ತಲ್‌ನ ರಾಯಲ್ ಪ್ಯಾಲೇಸ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಡು ಮತ್ತು ಕುಂಗ್ ಫು ಚಾಂಪಿಯನ್‌ಶಿಪ್–2026ರಲ್ಲಿ ರಾಯಚೂರಿನ ಶ್ರೀ ಸೂಗುರೇಶ್ವರ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.

ಚಾಂಪಿಯನ್‌ಶಿಪ್‌ನಲ್ಲಿ ಸಂಸ್ಥೆಯ ಒಟ್ಟು 22 ವಿದ್ಯಾರ್ಥಿಗಳು ಭಾಗವಹಿಸಿದ್ದು, ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ 22 ವಿದ್ಯಾರ್ಥಿಗಳು ಪದಕ ಗೆಲ್ಲುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ಈ ಪೈಕಿ 6 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದುಕೊಂಡರೆ, 10 ವಿದ್ಯಾರ್ಥಿಗಳು ದ್ವಿತೀಯ ಹಾಗೂ 6 ವಿದ್ಯಾರ್ಥಿಗಳು ತೃತೀಯ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತೋರಿದ ಪ್ರದರ್ಶನಕ್ಕೆ ಸಂಸ್ಥೆಯ ಮುಖ್ಯ ತರಬೇತುದಾರ ಎನ್. ಸೂಗಪ್ಪ ಹರ್ಷ ವ್ಯಕ್ತಪಡಿಸಿದರು. ನಿರಂತರ ಅಭ್ಯಾಸ, ಶಿಸ್ತು ಹಾಗೂ ಪರಿಶ್ರಮದಿಂದ ವಿದ್ಯಾರ್ಥಿಗಳು ಈ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಹ ತರಬೇತುದಾರರಾದ ಪ್ರಕಾಶ, ಮಲ್ಲೇಶ ಮತ್ತು ಸುರೇಶ ಅವರು ಪದಕ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಮಟ್ಟದ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.