ಲಿಂಗಸುಗೂರು: ತಾಲೂಕಿನ ಜಾಗೀರ ನಂದಿಹಾಳ ಗ್ರಾಮದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅಜೀಂ ಪ್ರೇಮ್ಜಿ ಫೌಂಡೇಶನ್ ಸಹಕಾರದೊಂದಿಗೆ ಸಂಗೊಳ್ಳಿ ರಾಯಣ್ಣ ಯುವಕರ ಸಂಘದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
ಶಿಬಿರವನ್ನು ಡಾ. ನೀಲಕಂಠ ರೋಡಲಬಂಡಾ ಉದ್ಘಾಟಿಸಿದರು. ವಿವಿಧ ಆರೋಗ್ಯ ಸಮಸ್ಯೆಗಳೊಂದಿಗೆ ಆಗಮಿಸಿದ್ದ ಗ್ರಾಮಸ್ಥರನ್ನು ವೈದ್ಯರು ತಪಾಸಣೆ ನಡೆಸಿ ಅಗತ್ಯ ಸಲಹೆ ನೀಡಿದರು. ಕಣ್ಣಿನ ಸಮಸ್ಯೆ, ಸಾಮಾನ್ಯ ಆರೋಗ್ಯ ಸಮಸ್ಯೆಗಳು, ಅಲರ್ಜಿ ಹಾಗೂ ಮಂಡಿನೋವಿನಿಂದ ಬಳಲುತ್ತಿದ್ದವರನ್ನು ಪರೀಕ್ಷಿಸಲಾಯಿತು.
ಈ ಸಂದರ್ಭದಲ್ಲಿ ವೈದ್ಯರಾದ ಡಾ. ಕಿಶೋರ್, ಡಾ. ಬಸವರಾಜ, ಡಾ. ರಂಗನಾಥ, ಫೌಂಡೇಶನ್ನ ಅರುಣ್, ಸುರೇಶ್, ಮೇಘನಾ, ಪ್ರಿಯಾಂಕಾ, ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುತ್ರಗೌಡ ನಂದಿಹಾಳ, ಜಿ. ಆದನಗೌಡ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.



