ರಾಯಚೂರು, ಅ.3: ನಗರದ ಡಾ. ಶ್ರೀವಾಣಿ ಅವರು ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಅ.4ರಂದು ಬೆಳಿಗ್ಗೆ 10 ಗಂಟೆಯೊಳಗೆ ಮರ್ಚೆಡ್ ಗ್ರಾಮದ ದರ್ಗಾ ಸಮೀಪ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಡಾ. ಶ್ರೀವಾಣಿ ಅವರ ನಿಧನಕ್ಕೆ ರಾಯಚೂರಿನ ಮಾಜಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಡಾ. ಸುರೇಂದ್ರ ಬಾಬು ಹಾಗೂ ಕುಟುಂಬಸ್ಥರು, ಬಂಧು-ಬಳಗ ಮತ್ತು ಹಿತೈಷಿಗಳು ತೀವ್ರ ಸಂತಾಪ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.