ರಾಯಚೂರು ಅ. 03 (ಕರ್ನಾಟಕ ವಾರ್ತೆ): ಸರ್ಕಾರದ ಆದೇಶದಂತೆ 2026-27ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಎಕರಿಗೆ 4 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಾಲ್ಗೆ 8,343 ರೂ. ರಂತೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ತಿಳಿಸಿದ್ದಾರೆ.
ದಿನಾಂಕ: 01-10-2026 ರಿಂದ ರೈತರ ನೊಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗಧಿಪಡಿಸಿದೆ. ರೈತರಿಂದ ಸೂರ್ಯಕಾಂತಿಯನ್ನು ಖರೀದಿಸುವ ಸಂಬಧ ರಾಯಚೂರು ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಹುಣಸಿಹಾಳಹುಡಾ ರಾಯಚೂರು. ಮೊ.ನಂ. 9743695467ಗೆ ಸಂಪರ್ಕ ಮಾಡಬಹುದಾಗಿದೆ.
ದೇವದುರ್ಗ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜಾಲಹಳ್ಳಿ. ಮೊ.ನಂ. 7899312989ಗೆ ಸಂಪರ್ಕ ಮಾಡಬಹುದಾಗಿದೆ.
ಲಿಂಗಸುಗೂರು ತಾಲೂಕಿನ ಖರೀದಿ ಕೇಂದ್ರಗಳಾದ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಮಟ್ಟೂರು ಮೊ.ನಂ. 7022551299 ಹಾಗೂ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘದ ಲಿಂಗಸುಗೂರು. ಮೊ.ನಂ 8792668442ಗೆ ಸಂಪರ್ಕ ಮಾಡಬಹುದಾಗಿದೆ.
ಸಿಂಧನೂರು ತಾಲೂಕಿನ ಖರೀದಿ ಕೇಂದ್ರಗಳಾದ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜವಳಗೇರಾ ಮೊ.ನಂ: 9964315868, ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಹುಡಾ ಮೊ.ನಂ: 9964315868 ಹಾಗೂ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಪಗಡದಿನ್ನಿ ಮೊ.ನಂ: 9945738297ಗೆ ಸಂಪರ್ಕ ಮಾಡಬಹುದಾಗಿದೆ.
ಮಾನವಿ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ತೋರಣದಿನ್ನಿ ಮೊ.ನಂ: 9902387316ಗೆ ಸಂಪರ್ಕ ಮಾಡಬಹುದಾಗಿದೆ.
ಸಿರವಾರ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಸಿರವಾರ ಮೊ.ನಂ: 9880891919ಗೆ ಸಂಪರ್ಕ ಮಾಡಬಹುದಾಗಿದೆ.
ಮಸ್ಕಿ ತಾಲೂಕಿನ ಖರೀದಿ ಕೇಂದ್ರ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ, ಜಾಲವಡಿಗಿ ಮೊ.ನಂ: 8073325424ಗೆ ಸಂಪರ್ಕ ಮಾಡಬಹುದಾಗಿದೆ. ಈ ಖರಿದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರ ಬಾಂಧವರು ಫ್ರೂಟ್್ಸ ಐ.ಡಿ ಯೊಂದಿಗೆ ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಿ ಸೂರ್ಯಕಾಂತಿ ಮಾರಾಟ ಮಾಡಿ ಸರ್ಕಾರದ ಯೋಜನೆಯ ಸದುಪಯೋಗ ಪರಿಡಿಸಕೊಳ್ಳಲು ಜಿಲ್ಲೆಯ ರೈತ ಬಾಂಧವರಲ್ಲಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.



