ಕವಿತಾಳ, ಅ.3: ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗೋರೆಬಾಳದ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿ ವೆಂಕಟೇಶ ಭಜಂತ್ರಿ ಹೀರಾ ವಿವಿಧ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
100 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ವೆಂಕಟೇಶ, ಗುಂಡು ಎಸೆತದಲ್ಲಿಯೂ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಜೊತೆಗೆ ಚಕ್ರ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಮೂರು ವಿಭಾಗಗಳಲ್ಲಿ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಶಿಕ್ಷಕರು, ಪಾಲಕರು ಹಾಗೂ ಹಿತೈಷಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡಿ ಶಾಲೆ ಹಾಗೂ ಊರಿಗೆ ಕೀರ್ತಿ ತರಲಿ ಎಂದು ದೇವೇಂದ್ರ ಹೀರಾ ಹಾಗೂ ಬಂಧು-ಬಳಗದವರು ಶುಭ ಹಾರೈಸಿದ್ದಾರೆ.



