ಲಿಂಗಸುಗೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ರಾಯಚೂರು ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಸಿ.ಕೆ. ಜೈನ್ ಅವರ ಹುಟ್ಟುಹಬ್ಬವನ್ನು ಕರವೇ ಶಿವರಾಮೇಗೌಡ ಬಣದ ತಾಲೂಕು ಘಟಕದ ಪದಾಧಿಕಾರಿಗಳು ವಿಕಲಚೇತನರೊಂದಿಗೆ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಿದರು.
ಹುಟ್ಟುಹಬ್ಬದ ಹೆಸರಿನಲ್ಲಿ ಅನಗತ್ಯವಾಗಿ ಹಣ ವ್ಯಯಿಸುವ ಬದಲು ಸಂಕಷ್ಟದಲ್ಲಿರುವವರಿಗೆ ನೆರವಾಗಬೇಕು ಎಂಬ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ವಿಕಲಚೇತನರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ, ಅವರಿಗೆ ಆಹಾರ ಕಿಟ್ಗಳನ್ನು ವಿತರಿಸುವ ಮೂಲಕ ಅಶೋಕ ಜೈನ್ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಸಾಮಾಜಿಕ ಕಳಕಳಿಯೊಂದಿಗೆ ಹುಟ್ಟುಹಬ್ಬದಂತಹ ವಿಶೇಷ ದಿನಗಳನ್ನು ಆಚರಿಸುವುದರಿಂದ ಅಗತ್ಯವಿರುವವರಿಗೆ ನೆರವು ದೊರೆಯುವುದರ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶ ನೀಡಲು ಸಾಧ್ಯ ಎಂದು ಪದಾಧಿಕಾರಿಗಳು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಮಾದೇಶ ಸರ್ಜಾಪುರ, ಉಪಾಧ್ಯಕ್ಷ ಬಸವರಾಜ ಪೇರಿ, ಪ್ರಧಾನ ಕಾರ್ಯದರ್ಶಿ ಶರಣಬಸವ ಈಚನಾಳ, ಸಂಘಟನಾ ಕಾರ್ಯದರ್ಶಿ ಮುತ್ತಣ್ಣ ಗುಡಿಹಾಳ, ಖಜಾಂಚಿ ಮಹಾಂತೇಶ ಹೂಗಾರ, ನಗರ ಘಟಕ ಅಧ್ಯಕ್ಷ ರಾಜು ರೆಡ್ಡಿ, ನಗರ ಘಟಕ ಉಪಾಧ್ಯಕ್ಷ ಜಗನ್ನಾಥ ಜಾಧವ್, ಡಾ. ಪಂಪಣ್ಣ, ದುರುಗೇಶ ನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



