ರಾಯಚೂರು ಅ. 06 (ಕರ್ನಾಟಕ ವಾರ್ತೆ):ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು "ಆಹಾರ ಮತ್ತು ನೀರಿನಲ್ಲಿರುವ ಫರ್ರ್ಫೋರ್ ಆಲೈಲ್ ಪದಾರ್ಥಗಳು ಹಾಗೂ ಮೈಕ್ರೋಪ್ಲಾಸ್ಟಿಕ್ಗಳು"(Poly-And Perfluoroalkyl Substances and Microplastics in Food and Water) ಎಂಬ ವಿಷಯದ ಮೇಲೆ 2 ಎರಡು ದಿನಗಳ ಪಾಲುದಾರರ ಸಮಾಲೋಚನಾ ರಾಷ್ಟ್ರೀಯ ಸಮ್ಮೇಳನವನ್ನು ಅಕ್ಟೋಬರ್ 29 ಹಾಗೂ 30ರಂದು ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗುತ್ತಿದೆ.
ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಇಂಜಿನಿಯರಿAಗ್ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದೆ. ಅಲ್ಲದೇ, ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧವನ್ನು(Poster Research Paper) ಸಹ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ಸಂಶೋಧನಾ ಪ್ರಬಂಧಕ್ಕೆ ನಗದು ಬಹುಮಾನವನ್ನು ನೀಡಲಾಗುವುದು. ಆಸಕ್ತರು ದಿನಾಂಕ: 20/10/2026ರಳೊಗಾಗಿ (Registration Link) https://forms.gle/G8jzPbRczYY5jYXWA) ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಅಧಿಕಾರಿಗಳನ್ನು (ಮೊ: 9620767819 & 9743084194) ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿಯ ವೆಬ್ ಸೈಟ್ https://kstacademy.in ವೀಕ್ಷಿಸಬಹುದಾಗಿದೆ.
ರಾಷ್ಟಿಯ ಸಮ್ಮೇಳನದ ಸದುಪಯೋಗವನ್ನು ವಿದ್ಯಾರ್ಥಿಗಳು, ಅಧ್ಯಾಪಕರು ಹಾಗೂ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಆನಂದ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



