ದೇವದುರ್ಗ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ–2026ರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ದೇವದುರ್ಗದ ಶ್ರೀಮದ್ ಆನೇಗುಂದಿ ಮೂಲ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಅಜೇಂದ್ರ ಮಹಾಸ್ವಾಮಿಗಳಿಗೆ ಗೌರವಪೂರ್ವಕ ಆಹ್ವಾನ ನೀಡಲಾಗಿದೆ.
ಅಕ್ಟೋಬರ್ 11ರಂದು ಭಾನುವಾರ ಬೆಳಿಗ್ಗೆ 11:50ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದ್ದು, ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಹಾಸ್ವಾಮಿಗಳಿಗೆ ಅಧಿಕೃತ ಆಹ್ವಾನ ಪತ್ರಿಕೆ ಕಳುಹಿಸಲಾಗಿದೆ.
ಕೊಪ್ಪಳದ ಸಂಸ್ಥಾನ ಶ್ರೀ ಗವಿಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದು, ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.
ಕರ್ನಾಟಕದ ಸಾಂಸ್ಕೃತಿಕ ವೈಭವ, ಧಾರ್ಮಿಕ ಪರಂಪರೆ ಹಾಗೂ ನಾಡಿನ ಹಿರಿಮೆಯನ್ನು ಪ್ರತಿಬಿಂಬಿಸುವ ಮೈಸೂರು ದಸರಾ ಮಹೋತ್ಸವಕ್ಕೆ ದೇವದುರ್ಗದ ಶ್ರೀ ಅಂಜನೇಂದ್ರ ಮಹಾಸ್ವಾಮಿಗಳನ್ನು ಆಹ್ವಾನಿಸಿರುವುದು ಸ್ಥಳೀಯ ಭಕ್ತರಲ್ಲಿ ಸಂತಸ ಮೂಡಿಸಿದೆ.
ನಾಡಿನ ಪ್ರತಿಷ್ಠಿತ ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಮಾರಂಭದಲ್ಲಿ ದೇವದುರ್ಗದ ಮಠದ ಪೀಠಾಧಿಪತಿಗಳಿಗೆ ಗೌರವಯುತ ಆಹ್ವಾನ ದೊರೆತಿರುವುದು ಮಠದ ಭಕ್ತವೃಂದ ಹಾಗೂ ದೇವದುರ್ಗದ ಜನತೆಗೆ ಹೆಮ್ಮೆಯ ವಿಷಯವಾಗಿದೆ.



