ಮಾನ್ವಿ: ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆ ಮತ್ತು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ಕಾಪಾಡುವಂತೆ ಆಗ್ರಹಿಸಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಎದ್ದೇಳು ಕರ್ನಾಟಕ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಎಸ್ಡಿಪಿಐ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಮೇಣದಬತ್ತಿ ಬೆಳಗಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಶೇಖ್ ಫರೀದ್ ಉಮ್ರಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಿಕೊಳ್ಳಲು ಎಲ್ಲರೂ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕಾದ ಅಗತ್ಯವಿದೆ ಎಂದು ಹೇಳಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಕೇವಲ ದೆಹಲಿಗೆ ಸೀಮಿತವಾಗಬಾರದು. ದೇಶದ ಪ್ರತಿಯೊಂದು ಭಾಗದಲ್ಲಿಯೂ ಜನರು ತಮ್ಮ ಹಕ್ಕುಗಳ ರಕ್ಷಣೆಗಾಗಿ ಜಾಗೃತರಾಗಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಎದ್ದೇಳು ಕರ್ನಾಟಕ ಸಂಘಟನೆಯ ಅಧ್ಯಕ್ಷ ಶರಣಕುಮಾರ ಮುದಂಗುಡ್ಡಿ, ಲಕ್ಷ್ಮಣ ಜಾನೇಕಲ್, ಶೇಖ್ ಬಾಬಾ ಹುಸೇನ್, ಎಂ.ಎ.ಎಚ್. ಮುಖೀಮ್, ಸೋಲಿಡಾರಿಟಿ ಯೂತ್ ಮೂವ್ಮೆಂಟ್ ತಾಲೂಕು ಅಧ್ಯಕ್ಷ ನಸೀರ್ ಅಲಿ, ರವೀಂದ್ರ, ಹನುಮಂತ ಕೋಟೆ, ಸತ್ತಾರ್ ಬಂಗ್ಲೇವಾಲೆ, ಎಸ್ಡಿಪಿಐ ಮುಖಂಡ ಇಬ್ರಾಹಿಂ, ಶುಕೂರ್ ಸಾಬ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.



