ರಾಯಚೂರು: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ನರಸಪ್ಪ ಯಕ್ಲಾಸಪೂರ ಅವರನ್ನು ನೇಮಕ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಆರ್. ರಘು (ಕೌಟಿಲ್ಯ) ಅವರು ನೇಮಕಾತಿ ಆದೇಶ ಹೊರಡಿಸಿದ್ದು, ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಜವಾಬ್ದಾರಿಯನ್ನು ನರಸಪ್ಪ ಯಕ್ಲಾಸಪೂರ ಅವರಿಗೆ ವಹಿಸಿದ್ದಾರೆ.

ನೂತನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದರ ಜೊತೆಗೆ ಲೋಕಸಭಾ ಚುನಾವಣೆ ಸೇರಿದಂತೆ ಮುಂಬರುವ ವಿವಿಧ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಸಮರ್ಪಣಾ ಮನೋಭಾವದಿಂದ ಶ್ರಮಿಸುವಂತೆ ನೇಮಕಾತಿ ಆದೇಶದಲ್ಲಿ ಆಶಯ ವ್ಯಕ್ತಪಡಿಸಿದ್ದಾರೆ.