ಲಿಂಗಸುಗೂರು: ನಮ್ಮ ಕರ್ನಾಟಕ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಸವರಾಜ ಪಡಕೋಟೆ ಅವರ 57ನೇ ಜನ್ಮದಿನದ ಅಂಗವಾಗಿ ಸಂಘಟನೆಯ ಲಿಂಗಸುಗೂರು ತಾಲೂಕು ಘಟಕದ ಪದಾಧಿಕಾರಿಗಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು ಹಾಗೂ ಹಣ್ಣು ವಿತರಿಸುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಮ್ಮ ಕರ್ನಾಟಕ ಸೇನೆಯ ತಾಲೂಕು ಅಧ್ಯಕ್ಷ ಶಿವರಾಜ ನಾಯ್ಕ, ಬಸವರಾಜ ಪಡಕೋಟೆ ಅವರು ಸಮಾಜಸೇವೆ ಹಾಗೂ ಜನಪರ ಹೋರಾಟಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದಾರೆ. ಅವರ ಜನ್ಮದಿನವನ್ನು ಆಡಂಬರದಿಂದ ಆಚರಿಸುವ ಬದಲು ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಸೇವಾ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಬಸವರಾಜ ಪಡಕೋಟೆ ಅವರ ಮಾರ್ಗದರ್ಶನದಲ್ಲಿ ನಮ್ಮ ಕರ್ನಾಟಕ ಸೇನೆಯು ರಾಜ್ಯಾದ್ಯಂತ ಸಂಘಟನೆಯನ್ನು ಬಲಪಡಿಸುವುದರ ಜೊತೆಗೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದೆ. ಮುಂದಿನ ದಿನಗಳಲ್ಲಿಯೂ ಬಡವರು, ಶೋಷಿತರು ಹಾಗೂ ಅಗತ್ಯವಿರುವ ಜನರಿಗೆ ನೆರವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿ ನಿರುಪಾದಿ ಹಿರೇಮಠ, ಉಪಾಧ್ಯಕ್ಷ ಚಂದ್ರು ನಾಯಕ, ಸಂಚಾಲಕ ಬಸವರಾಜ ನಾಯಕ, ನಗರ ಘಟಕದ ಅಧ್ಯಕ್ಷ ಚಂದ್ರಕಾಂತ ಭೋವಿ, ತಾಲೂಕು ಖಜಾಂಚಿ ರವಿಕುಮಾರ, ಕಾರ್ಮಿಕ ಘಟಕದ ಅಧ್ಯಕ್ಷ ದೇವೇಂದ್ರ ನಾಯಕ, ನಗರ ಯುವ ಘಟಕದ ಅಧ್ಯಕ್ಷ ಶಿವರಾಜ ಅಲಬನೂರು, ತಾಲೂಕು ಯುವ ಘಟಕದ ಅಧ್ಯಕ್ಷ ಕಿರಣ ನಾಯಕ, ಸಂಘಟನಾ ಕಾರ್ಯದರ್ಶಿ ರಮೇಶ ಭೋವಿ, ಸಹ ಕಾರ್ಯದರ್ಶಿ ಮಹಾಂತಯ್ಯ ಸ್ವಾಮಿ, ಲಕ್ಷ್ಮಣ ಭೋವಿ, ವೆಂಕಟೇಶ ಗುತ್ತೇದಾರ, ರಾಜು ನಾಯಕ, ಕೃಷ್ಣ ಭೋವಿ, ಸೊಹನ್ ಕುಮಾರ ಯಾದವ್, ಗೌತಮ್ ಕುಮಾರ, ಸಂಗಪ್ಪ ತೋಟದ, ಮಹೇಂದ್ರ ಕುಮಾರ, ದೇವಪ್ಪ ಸರ್ಜಾಪುರ, ಮಾರ್ಕಂಡಪ್ಪ ನಾಯಕ, ಸಾಗರ್, ಶಂಭುಗೌಡ ಸರ್ಜಾಪುರ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



