ರಾಯಚೂರು ಅ. 13 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಯಾವುದೇ ರಸ್ತೆ ಅಪಘಾತಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾಗೂ ಅಪಘಾತಗಳು ಆಗಬಹುದಾದ ಸ್ಥಳಗಳನ್ನು ಗುರುತಿಸಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಕ್ಟೋಬರ್ 13ರ ಮಂಗಳವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಆರ್ಟಿಒ, ಲೋಕೋಪಯೋಗಿ ಇಲಾಖೆ ಮತ್ತು ಪೊಲೀಸ್ ಇಲಾಖೆಗಳು ಒಟ್ಟಾಗಿ ಜಂಟಿ ತನಿಖೆ ನಡೆಸಿ, ಅಪಘಾತಗಳನ್ನು ತಡೆಯಲು ಅಗತ್ಯವಿರುವ ಕ್ರಮಗಳ ಬಗ್ಗೆ ವರದಿಯನ್ನು ಸಲ್ಲಿಸಬೇಕು. ಅಲ್ಲದೆ ಮುಂದಿನ 20 ದಿನಗಳಲ್ಲಿ ಎಲ್ಲಾ ಫೀಡರ್ ರಸ್ತೆಗಳು ಮತ್ತು ಜಂಕ್ಷನ್ಗಳನ್ನು ಪರಿಶೀಲನೆ ಮಾಡಿ, ವರದಿ ನೀಡಬೇಕೆಂದು ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಕಡ್ಡಾಯವಾಗಿ ಬೈಕ್ ಸವಾರರು ಬೈಕ್ ಚಾಲನೆ ಮಾಡುವ ಸಮಯದಲ್ಲಿ ಹೆಲ್ಮೆಟ್ ಧರಿಸಬೇಕು. ವಾಹನ ಚಾಲಾಯಿಸುವಾಗ ಮೊಬೈಲ್ ಬಳಕೆ ಮಾಡಬಾರದು. ಅಲ್ಲದೆ ವಾಹನಗಳಿಗೆ ಎರಡು ಕಡೆಗೆ ಸೈಡ್ ಮಿರರ್ ಇರಬೇಕು. ಜಿಲ್ಲೆಯಲ್ಲಿ ಈ ನಿಯಮಗಳನ್ನು ಪಾಲಿಸದ ಸವಾರರ ವಿರುದ್ಧ ದಂಡ ವಿಧಿಸಿ, ಕ್ರಮ ಕೈಗೊಳ್ಳಬೇಕು. ರಸ್ತೆಗಳು ಮತ್ತು ಜಂಕ್ಷನ್ಗಳನ್ನು ಕಾಲಕಾಲಕ್ಕೆ ಪರಿಶೀಲಿಸಬೇಕು ಎಂದು ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾಯಚೂರು ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಪೀಡ್ ಬ್ರೇಕರ್ಗಳು ಮತ್ತು ಟೆಕ್ಸ್ಟ್ಗಳನ್ನು ಪಟ್ಟಿ ಮಾಡಿ, ವರದಿ ನೀಡಬೇಕು. ಅಲ್ಲದೆ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ರಸ್ತೆ ಸವಾರಿಗೆ ಕೇವಲ ದಂಡ ವಿಧಿಸುವುದರಿಂದ ಮಾತ್ರ ಜನರಲ್ಲಿ ಬದಲಾವಣೆ ತರಲು ಸಾಧ್ಯವಿಲ್ಲ. ಸಾರ್ವಜನಿಕರಿಗೆ ನಿರಂತರವಾಗಿ ಹೆಚ್ಚಿನ ರೀತಿಯಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರಸ್ತೆ ನಿಯಮಗಳನ್ನು ಸಾರ್ವಜನಿಕರು ಪಾಲಿಸಲಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
877 ಹಳ್ಳಿಗಳಲ್ಲಿ ಬಸ್ ಸೌಲಭ್ಯ: ಜಿಲ್ಲೆಯ ಒಟ್ಟು 899 ಹಳ್ಳಿಗಳ ಪೈಕಿ 877 ಹಳ್ಳಿಗಳಿಗೆ ಈಗಾಗಲೇ ಬಸ್ ಸೌಲಭ್ಯ ಕಲ್ಪಿಸಲಾಗಿದ್ದು, ಉಳಿದ ಹಳ್ಳಿಗಳಿಗೂ ಬಸ್ ಸೌಕರ್ಯ ಒದಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಮುಂದಿನ 20 ದಿನಗಳಲ್ಲಿ ಎಲ್ಲಾ ಶಾಲೆಗಳು ತಮ್ಮ ಬಸ್ ಸೇವೆಗಳಿಗೆ ಸಂಬAಧಿಸಿದAತೆ ಯಾವ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಕುರಿತು ವರದಿಯನ್ನು ಸಲ್ಲಿಸಬೇಕು. ಸಾರಿಗೆ ಕುರಿತು ಬಂದಿರುವ ದೂರುಗಳಲ್ಲಿ ಹೆಚ್ಚಿನವು ನಿಜವಾದ ದೂರುಗಳಾಗಿವೆ ಎಂದು ಕಂಡುಬAದಿರುವುದರಿAದ ಯಾವುದೇ ದೂರುಗಳನ್ನು ಕಡೆಗಣಿಸದೆ ತಕ್ಷಣವೇ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಬಸ್ಸುಗಳು ಶಾಲಾ ವೇಳೆಗೆ ಸರಿಯಾಗಿ ಸಂಚರಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ಯಾವುದೇ ಕಾರಣಕ್ಕೂ ಮಕ್ಕಳ ಸುರಕ್ಷತೆಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ್, ಪ್ರಾದೇಶಿಕ ರಸ್ತೆ ಸಾರಿಗೆ ಇಲಾಖೆಯ ಅಧಿಕಾರಿ ರಾಕೇಶ್ ಎಮ್., ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಬಸವರಾಜ., ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ರಾಯಚೂರು ವಿಭಾಗದ ನಿಯಂತ್ರಣಾಧಿಕಾರಿ ಇಮಾಮ್ ಕಾಸೀಮ್ ಕಂದಗಲ್ಲ, ರಾಯಚೂರು ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ತಿಮ್ಮಪ್ಪ ಬಿರಾದಾರ್, ಎಇಇಗಳಾದ ಮಹೇಶ್, ಜ್ಯೋತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಇದ್ದರು.



