ರಾಯಚೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್ಟಿಸಿ) ರಾಯಚೂರು ವಿಭಾಗದ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಕನ್ನಡ ಭಾಷಾ ಅನುಷ್ಠಾನ ಹಾಗೂ 71ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯನ್ನು ಗುರುವಾರ ಹಮ್ಮಿಕೊಳ್ಳಲಾಯಿತು.
ವಿಭಾಗೀಯ ನಿಯಂತ್ರಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕನ್ನಡ ಭಾಷೆಯ ಬಳಕೆಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಸಂಸ್ಥೆಯ ಆಡಳಿತ ಮತ್ತು ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಕನ್ನಡವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಚರ್ಚಿಸಲಾಯಿತು.
ನವೆಂಬರ್ 1ರಂದು ಆಚರಿಸಲಿರುವ 71ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಯೋಜಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳು, ಕಾರ್ಯಕ್ರಮಗಳ ರೂಪುರೇಷೆ ಹಾಗೂ ಸಿಬ್ಬಂದಿಯ ಭಾಗವಹಿಸುವಿಕೆ ಕುರಿತು ಸಮಾಲೋಚನೆ ನಡೆಸಲಾಯಿತು.
ಸಾರಿಗೆ ಸಂಸ್ಥೆಯ ಸಿಬ್ಬಂದಿಯಲ್ಲಿ ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯ ಬಗ್ಗೆ ಅಭಿಮಾನ ಮೂಡಿಸುವುದರ ಜೊತೆಗೆ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಯಶಸ್ವಿಗೊಳಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಹಾಗೂ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.



