ಲಿಂಗಸುಗೂರು: ಲಿಂಗಸುಗೂರು ತಾಲೂಕು ಪೊಲೀಸ್ ಇಲಾಖೆಯ ನೂತನ ಡಿವೈಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿರುವ ಸುಲೇಮಾನ್ ತಹಸೀಲ್ದಾರ್ ಅವರನ್ನು ತಾಲೂಕು ಟಿಪ್ಪು ಸುಲ್ತಾನ್ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಅಲ್ಲಾಬಕ್ಷ ಮನಿಯಾರ್ ನೇತೃತ್ವದಲ್ಲಿ ಪದಾಧಿಕಾರಿಗಳು ನೂತನ ಡಿವೈಎಸ್ಪಿ ಅವರಿಗೆ ಸನ್ಮಾನ ಸಲ್ಲಿಸಿ, ಶುಭ ಹಾರೈಸಿದರು. ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕೈಗೊಳ್ಳುವ ಕಾರ್ಯಗಳಿಗೆ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ನೂತನ ಅಧಿಕಾರಿಯ ಆಗಮನವನ್ನು ಸ್ವಾಗತಿಸಿದ ಸಂಘದ ಸದಸ್ಯರು, ಅವರ ಅಧಿಕಾರಾವಧಿಯಲ್ಲಿ ತಾಲೂಕಿನಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಹೆಚ್ಚಿನ ಆದ್ಯತೆ ದೊರೆಯಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಶೇಕ್ ಅಹಮದ್, ಅಶು, ಹಿರಿಯ ಪತ್ರಕರ್ತ ಅಜರ್, ಸೈಯದ್, ಇಮ್ರಾನ್, ಮೆಹಬೂಬ್, ಶಾಹಿದ್ ಹವಾಲ್ದಾರ್, ಯುನೋಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.