ರಾಯಚೂರು ಅ. 17 (ಕರ್ನಾಟಕ ವಾರ್ತೆ): ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ಟೋಬರ್ 26ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ತಿಳಿಸಿದರು.
ಅಕ್ಟೋಬರ್ 17ರ ಶನಿವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣಾ ನೀತಿ ಸಂಹಿತೆ ನಿಯಮ ಪಾಲಿಸಿಕೊಂಡು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಥವಾ ವಾಲ್ಮೀಕಿ ಭವನದಲ್ಲಿ ಜಯಂತಿ ಆಚರಿಸಲು ಹಾಗೂ ಮೆರವಣಿಗೆ ಮಾಡುವ ಕುರಿತು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ವಾಲ್ಮೀಕಿ ಅವರ ಜೀವನ, ಆದರ್ಶ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆ ಸ್ಮರಿಸಲು ಆದ್ಯತೆ ನೀಡಲಾಗುವುದು ಎಂದರು.
ಅAದು ಬೆಳಿಗ್ಗೆ 7.30ಕ್ಕೆ ಲಿಂಗಸುಗೂರು ರಸ್ತೆಯ ವಾಲ್ಮೀಕಿ ವೃತ್ತದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುತ್ತದೆ. ಬೆಳಿಗ್ಗೆ 11.30ಕ್ಕೆ ಮಹರ್ಷಿ ವಾಲ್ಮೀಕಿ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಸಿದ್ದತೆ ಅಗತ್ಯ ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಮಾತನಾಡಿ, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಯಂತಿ ಆಚರಣೆ ಪ್ರತಿಯೊಂದು ಹಂತದಲ್ಲಿಯೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಾರ್ಯಕ್ರಮದ ರೂಪುರೇಷೆ ಅದಕ್ಕೆ ಅನುಗುಣವಾಗಿ ಸಿದ್ಧಪಡಿಸಬೇಕು. ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ, ನಿಗದಿತ ಕಾರ್ಯಕ್ರಮ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಜಯಂತಿ ಆಚರಣೆಗೆ ಅಗತ್ಯವಿರುವ ಸಭಾಂಗಣದ ವ್ಯವಸ್ಥೆ, ಪುಷ್ಪಾರ್ಚನೆ, ಉಪನ್ಯಾಸಕ್ಕೆ ಸಂಬAಧಿಸಿದ ಸಿದ್ಧತೆ ಮುಂಚಿತವಾಗಿಯೇ ಪೂರ್ಣಗೊಳಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಗೊಂದಲ ಅಥವಾ ಲೋಪ ಉಂಟಾಗದAತೆ ಸಂಬAಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದರಿಂದ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಉತ್ತೇಜನ ಸಿಗಲಿದೆ. ಇಂತಹ ಸನ್ಮಾನ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ. ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯಕ್ಕೆ ಜಯಂತಿ ಕಾರ್ಯಕ್ರಮದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ರಾಯಚೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತೆ ಸಂತೋಷ ರಾಣಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸರಸ್ವತಿ, ರಾಯಚೂರು ಸಹಾಯಕ ಆಯುಕ್ತರ ಕಚೇರಿಯ ತಹಶಿಲ್ದಾರ್ ರಾಜಶೇಖರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ವಾಲ್ಮೀಕಿ ಸಮಾಜದ ಮುಖಂಡರು, ವಕೀಲರು, ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.



