ರಾಯಚೂರು ಅ. 17 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ನವೆಂಬರ್ 1ರಂದು ಆಚರಿಸಲ್ಪಡುವ ಕನ್ನಡ ರಾಜ್ಯೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಕ್ಟೋಬರ್ 17ರ ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ, ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ತಮಗೆ ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವದ ದಿನದ ಹಿಂದಿನ ದಿನ ಹಾಗೂ ಕನ್ನಡ ರಾಜ್ಯೋತ್ಸವದ ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕನ್ನಡ ರಾಜ್ಯೋತ್ಸವ ಅಂಗವಾಗಿ ನವಂಬರ್ 1ರ ಬೆಳಿಗ್ಗೆ 7.30ಕ್ಕೆ ನಗರದ ಕರ್ನಾಟಕ ಸಂಘದ ಆವರಣದಿಂದ ಭುವನೇಶ್ವರಿಯ ಮೆರವಣಿಗೆಯು ವಿವಿಧ ವೃತ್ತಗಳಲ್ಲಿ ಸಂಚರಿಸಿದ ನಂತರ ಜಿಲ್ಲಾ ಕ್ರೀಡಾಂಗಣ ತಲುಪಲಿದೆ. ಬೆಳಿಗ್ಗೆ 9ಕ್ಕೆ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯ ಹಾಜರಿರಬೇಕು ಎಂದರು.

ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್ ಪಡೆ, ಗೃಹರಕ್ಷಕ ದಳ, ಭಾರತ ಸೇವಾದಳ ಹಾಗೂ ವಿವಿಧ ಶಾಲೆ ಹಾಗೂ ಕಾಲೇಜ್ ಗಳಿಂದ ಶಿಸ್ತು ಬದ್ಧವಾಗಿ ಪಥ ಸಂಚಲನ ನಡೆಯಲಿದೆ. ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ಕ್ರಮವಹಿಸಬೇಕು. ಶಿಷ್ಟಾಚಾರದ ಅನ್ವಯ ಆಸನದ ವ್ಯವಸ್ಥೆಗೆ ಕ್ರಮ ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ–ಕಾಲೇಜು ವಿದ್ಯಾರ್ಥಿಗಳು, ಸಂಘ–ಸAಸ್ಥೆಯವರು ಆಸಕ್ತಿಯಿಂದ ಭಾಗವಹಿಸುವಂತೆ ಪ್ರೇರೇಪಿಸಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ: ಕರ್ನಾಟಕ ರಾಜ್ಯೋತ್ಸವ-2026ರ ಅಂಗವಾಗಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ರಾಯಚೂರು ನಗರ, ರಾಯಚೂರು ಗ್ರಾಮೀಣ ಸೇರಿದಂತೆ ಜಿಲ್ಲೆಯ ಪ್ರತಿ ತಾಲೂಕಿನಿಂದ ಒಬ್ಬರನ್ನು ಗುರುತಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಅಂದು ನೀಡಿ ಸನ್ಮಾನಿಸಿ ಗೌರವಿಸಲಾಗುತ್ತದೆ. ಈ ಆಯ್ಕೆಯು ಪಾರದರ್ಶಕವಾಗಿ ನಡೆಸಲು ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರಾದ ಮುರಳಿಧರ್ ರಾವ್, ರಾಯಚೂರು ಡಿವೈಎಸ್ಪಿ ಪರಶುರಾಮ್, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರೇಶ ನಾಯಕ, ಆಹಾರ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ಜಿ.ಹರೀಶ್, ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕಿ ಕವಿತಾ ಕನ್ನಡ ಪರ ಸಂಘಟನೆಗಳ ಮುಖಂಡರಾದ ಬಾಬು ಭಂಢಾರಿಗಲ್, ಅಲ್ತಾಫ್, ಕೆ.ಶ್ರೀನಿವಾಸ, ಮಾರುತಿ ಬಡಿಗೇರ, ಅಣ್ಣಪ್ಪ ಮೇಟಿಗೌಡ, ವೆಂಕಟೇಶ ಬೇವಿನಬೆಂಚಿ, ಬೀಮನಗೌಡ ಇಟಿಗಿ, ಶಿವಕುಮಾರ್ ಯಾದವ್, ಶಾಂತ ಕುಲಕರ್ಣಿ ಸೇರಿದಂತೆ ವಿವಿಧ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.