ರಾಯಚೂರು, ಅ.26: ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ವಿರೂಪಾಕ್ಷಿ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಜಯಂತಿಯನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಉಪಾಧ್ಯಕ್ಷ ಸಣ್ಣ ನರಸಿಂಹ ನಾಯಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಗಾಣದಾಳ ಲಕ್ಷ್ಮಿಪತಿ, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ನರಸಪ್ಪ ಆಶಾಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಜಂಬು ಯಾದವ್ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು.
ಮಹರ್ಷಿ ವಾಲ್ಮೀಕಿ ಅವರು ತಮ್ಮ ರಾಮಾಯಣ ಮಹಾಕಾವ್ಯದ ಮೂಲಕ ಸಮಾಜಕ್ಕೆ ನೀತಿ, ಧರ್ಮ, ಸತ್ಯ ಮತ್ತು ಮಾನವೀಯ ಮೌಲ್ಯಗಳ ಸಂದೇಶ ನೀಡಿದ್ದಾರೆ. ಅವರ ಆದರ್ಶಗಳು ಇಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಿವೆ ಎಂದು ಮುಖಂಡರು ಸ್ಮರಿಸಿದರು.
ಈ ಸಂದರ್ಭದಲ್ಲಿ ಎಸ್. ರಾಜು, ಎಚ್.ಕೆ. ರವಿಕುಮಾರ್, ಆದಿರಾಜ್, ಮೂಕಪ್ಪ, ಪ್ರಕಾಶ್, ವೆಂಕಟಸ್ವಾಮಿ ಸೇರಿದಂತೆ ಜೆಡಿಎಸ್ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.



