ಲಿಂಗಸುಗೂರು: ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯದ ಮೌಲ್ಯಗಳನ್ನು ಗೌರವಿಸುವುದರ ಜೊತೆಗೆ ಅವರ ಆದರ್ಶಗಳನ್ನು ಪ್ರತಿಯೊಂದು ಸಮಾಜದ ಜನರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಮಾಜದ ಮುಖಂಡ ದುರುಗಪ್ಪ ಬಂಡೆಬಾವಿ ಹೇಳಿದರು.

ಪಟ್ಟಣದ ಗಡಿಯಾರ ಚೌಕದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯದ ಮೂಲಕ ಸಮಾಜಕ್ಕೆ ಸತ್ಯ, ಧರ್ಮ, ನ್ಯಾಯ ಹಾಗೂ ಮಾನವೀಯ ಮೌಲ್ಯಗಳ ಸಂದೇಶ ನೀಡಿದ್ದಾರೆ. ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಕವಾಗಿದ್ದು, ಪ್ರತಿಯೊಬ್ಬರೂ ಸಮಾಜದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಜೀವನ ಮತ್ತು ಆದರ್ಶಗಳನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಸಮಾಜದ ಪ್ರಮುಖರಾದ ಶಿವಪ್ಪ ಹಾಲಬಾವಿ, ಮಾನಪ್ಪ ಕಸಬಾ ಲಿಂಗಸೂರು, ಬಾಬು ನಾಯಕ, ಹನುಮಂತ ನಾಯಕ, ಲಕ್ಷ್ಮಿ ಬಾರೇಕರ್, ಕುಮಾರ ರಾಮನ ಸಂರಕ್ಷಣಾ ಸಮಿತಿಯ ತಾಲೂಕು ಅಧ್ಯಕ್ಷರು, ಸೋಮಶೇಖರ್ ನಾಯಕ, ಕೃಷ್ಣ ನಾಯಕ, ರಾಜೇಶ್ ನಾಯಕ, ರಾಮ, ಅಶೋಕ್ ನಾಯಕ, ಹನುಮಂತಪ್ಪ ಗಲಗಿನದೊಡ್ಡಿ, ಬಸವರಾಜ ನಾಯಕ ಬೈಲಗುಡ್ಡ ಸೇರಿದಂತೆ ಇತರರು ಉಪಸ್ಥಿತರಿದ್ದರು.